ವಿಜಯನಗರ ಕ್ಷೇತ್ರದಲ್ಲಿ ಆರದ ಬಂಡಾಯ

Team Udayavani, Nov 18, 2019, 3:00 AM IST

ಹೊಸಪೇಟೆ: ವಿಜಯನಗರ ಕ್ಷೇತ್ರದ ಉಪಚುನಾವಣೆಗೆ ಬಂಡಾಯದ ಬಿಸಿ ಆರುವ ಬದಲು ಹೆಚ್ಚು ತ್ತಲೇ ಇದೆ. ಬಿಜೆಪಿ ಕಾಂಗ್ರೆಸ್‌ ಪಕ್ಷಗಳಲ್ಲಿ ಬಂಡಾಯ ಶಮನಕ್ಕೆ ಪ್ರಯತ್ನಿಸಿದರೂ ಫಲ ಕೊಡುತ್ತಿಲ್ಲ. ಬಿಜೆಪಿ ಬಂಡಾಯ ಅಭ್ಯರ್ಥಿ ಕವಿರಾಜ್‌ ಅರಸ್‌ ಅವರ ಮನವೊಲಿಕೆ ವಿಫಲವಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ.

ಕ್ಷೇತ್ರದ ಉಪಚುನಾವಣೆ ಉಸ್ತುವಾರಿ ವಹಿಸಿ ಕೊಂಡಿ ರುವ ಸಚಿವ ಬಿ.ಶ್ರೀರಾಮುಲು ಬಿಜೆಪಿ ಬಂಡಾಯ ಅಭ್ಯರ್ಥಿ ಕವಿರಾಜ ಅರಸ್‌ ನಿವಾಸಕ್ಕೆ ಭಾನುವಾರ ತೆರಳಿ ಸಂಧಾನಕ್ಕೆ ಯತ್ನಿಸಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಸುಮಾರು ಅರ್ಧ ತಾಸಿಗೂ ಹೆಚ್ಚು ಹೊತ್ತು ಶ್ರೀರಾಮುಲು, ಕವಿರಾಜ್‌ ಜತೆ ಮಾತುಕತೆ ನಡೆಸಿದರು. ನಂತರ ಮಾತನಾಡಿದ ಶ್ರೀರಾಮುಲು ಪಕ್ಷದ ಅಭಿಪ್ರಾಯಗಳನ್ನು ಅವರಿಗೆ ಮುಟ್ಟಿಸಲಾಗಿದೆ. ಸಮಯಾವಕಾಶ ಕೇಳಿದ್ದಾರೆ. ಅವರ ಅಭಿಪ್ರಾಯವನ್ನು ಪಕ್ಷದ ನಾಯಕರ ಗಮನಕ್ಕೆ ತರಲಾಗುವುದು ಎಂದರು.

ಬಿಜೆಪಿ ಬಂಡಾಯ ಅಭ್ಯರ್ಥಿ ಕವಿರಾಜ ಅರಸ್‌ ಮಾತನಾಡಿ, ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿ ದವರಿಗೆ ರಾಮುಲು ಅವರು ಬೆಂಬಲ ನೀಡುತ್ತಿದ್ದಾರೆ. ಬಳ್ಳಾರಿಯಲ್ಲಿ ರಾಮುಲು ಅವರನ್ನು ಕಡೆಗಣಿಸಲಾಗಿದೆ. ನಮ್ಮನ್ನು ಸಹ ಪಕ್ಷದಲ್ಲಿ ಕಡೆಗಣಿಸಲಾಗಿದೆ. ಈ ರಾಮ ಲಂಕೆಗೆ ಬೆಂಕಿ ಇಡುವುದು ಶತಸಿದ್ಧ ಎಂದು ಹೇಳಿದರು. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಅಶೋಕ ಅವರು ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಆದರೆ ನನ್ನ ನಿರ್ಧಾರ ಬದಲಿಸಿಲ್ಲ. ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆದ್ದು ಸಚಿವನಾಗಿ ಬರುವೆ ಎಂದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ