ರಾಜ್ಯಸಭೆ ಸ್ಥಾನಕ್ಕೆ ಲಾಬಿ ನಡೆಸಿಲ್ಲ
Team Udayavani, Jun 6, 2020, 7:12 AM IST
ಹುಬ್ಬಳ್ಳಿ: ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಯಾವುದೇ ಲಾಬಿ ಮಾಡುವುದಿಲ್ಲ. ನಾನು ಬಿಜೆಪಿ ನಿಷ್ಠಾವಂತ ಕಾರ್ಯಕರ್ತ. ಪಕ್ಷದ ಮುಖಂಡರ ಆದೇಶ ಪಾಲನೆ ಮಾಡುತ್ತೆನೆಂದು ಮಾಜಿ ಸಂಸದ ಹಾಗೂ ವಿಆರ್‌ಎಲ್ ಸಮೂಹ ಸಂಸ್ಥೆ ಚೇರ್ಮನ್ ನ್ ಡಾ. ವಿಜಯ ಸಂಕೇಶ್ವರ ಹೇಳಿದರು.
ಸುದ್ದಿಗೋಷ್ಠಿಯಲ್ಲಿಮಾತನಾಡಿ, ರಾಜ್ಯಸಭೆ ಸದಸ್ಯ ಸ್ಥಾನಕ್ಕಾಗಿ ನಾನು ಯಾರೊಂದಿಗೂ ಚರ್ಚಿಸಿಲ್ಲ. ಯಾವುದೇ ಮುಖಂಡರು ಕೂಡ ನನ್ನನ್ನು ಸಂಪರ್ಕ ಮಾಡಿಲ್ಲ ಎಂದರು. ಜೀವನಪೂರ್ತಿ ಸರ್ಕಾರದಿಂದ ವಿಧಾನ ಪರಿಷತ್ ಸದಸ್ಯ ಹಾಗೂ ಸಂಸದ ಪಿಂಚಣಿಯನ್ನು ಪಡೆಯದಿರಲು ನಿರ್ಧರಿಸಿದ್ದೇನೆ. ಎರಡೂ ಪಿಂಚಣಿಗಳನ್ನು ನೀಡದಿರುವಂತೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ.
ದೇಶದ ಆರ್ಥಿಕ ಸ್ಥಿತಿ ಸುಧಾರಣೆಗಾಗಿ ಆಮದು ಪ್ರಮಾಣ ಕಡಿಮೆಯಾಗಬೇಕು. ಸ್ವದೇಶಿ ವಸ್ತುಗಳ ಖರೀದಿ ಹೆಚ್ಚಬೇಕು. ಲಾಕ್ ಡೌನ್‌ನಿಂದಾಗಿ ಸಾರಿಗೆ ಉದ್ಯಮ ಕುಸಿತ ಕಂಡಿದೆ. ಅದು ಚೇತರಿಸಿಕೊಳ್ಳಲು ಕನಿಷ್ಠ 1 ವರ್ಷವಾದರೂ ಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್
ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್
ಶ್ರೀರಂಗಪಟ್ಟಣ : ಸರ್ವೆ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳ ಗೈರು : ರೈತರಿಂದ ಕಚೇರಿಗೆ ಮುತ್ತಿಗೆ
ರಾಗಿ ಖರೀದಿ ಟೋಕನ್ ನೀಡುವಲ್ಲಿ ತಾರತಮ್ಯ : ಆಕ್ರೋಶಿತ ರೈತರಿಂದ ಹೆದ್ದಾರಿ ತಡೆ
ಕೋವಿಡ್ ನಿಯಮ ಉಲ್ಲಂಘನೆ: ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ ಸೇರಿ 29 ಮಂದಿಗೆ ಸಮನ್ಸ್