Udayavni Special

ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸಿದೆ: ಡಿ.ಕೆ ಶಿವಕುಮಾರ್


Team Udayavani, Sep 22, 2020, 6:23 PM IST

dk-shivakumar

ಬೆಂಗಳೂರು: ಕೋವಿಡ್ ನಂತಹ ಕಠಿಣ ಪರಿಸ್ಥಿತಿಯಲ್ಲಿ ಜನರ ಕಷ್ಟಗಳಿಗೆ ನಮ್ಮ ಹೃದಯ ಮಿಡಿಯಬೇಕಿತ್ತು. ಆದರೆ ರಾಜ್ಯ ಸರ್ಕಾರ ರೈತರು, ಬಡವರು, ಕಾರ್ಮಿಕರ ವಿಚಾರದಲ್ಲಿ ಅಮಾನವೀಯವಾಗಿ ನಡೆದುಕೊಂಡಿದ್ದು, ರಾಜ್ಯದ ಜನ ಇವರನ್ನು ಕ್ಷಮಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಧಾನಸಭೆಯಲ್ಲಿ ಹರಿಹಾಯ್ದಿದ್ದಾರೆ.

ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ ಮಂಗಳವಾರದ ಕಲಾಪದಲ್ಲಿ ಕೋವಿಡ್ ವಿಚಾರವಾಗಿ ಮಾತನಾಡಿದ ಡಿ.ಕೆ ಶಿವಕುಮಾರ್, ಕೋವಿಡ್ ಪರಿಸ್ಥಿತಿಯನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರು ಇದನ್ನು ದೇವರ ಆಟ ಎಂದು ಹೇಳಿದ್ದಾರೆ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಅಂತಾ ಇದ್ದ ಮೇಲೆ ಅದಕ್ಕೆ ಅದರದೇ ಆದ ಜವಾಬ್ದಾರಿ, ನಮಗೆ ನಮ್ಮದೇ ಆದ ಜವಾಬ್ದಾರಿ ಇರುತ್ತದೆ. ಕಳೆದ ಅಧಿವೇಶನ ನಡೆಯುವಾಗ ಈ ಪರಿಸ್ಥಿತಿ ಎದುರಾಗಿತ್ತು. ದೇಶದ ಪ್ರಧಾನಿಗಳು ಕೇವಲ ನಾಲ್ಕು ಗಂಟೆ ಕಾಲಾವಕಾಶ ನೀಡಿ ಲಾಕ್ ಡೌನ್ ಹೇರಿದರು. ದೀಪ ಹಚ್ಚಲು, ಗಂಟೆ ಹೊಡೆಯಲು ನಾಲ್ಕು ದಿನ ಸಮಯ ಕೊಟ್ಟರು. ನಾವು ಅದನ್ನು ಸ್ವೀಕರಿಸಿದೆವು. ಮುಖ್ಯಮಂತ್ರಿಗಳು ಸ್ವಲ್ಪ ಮನಸ್ಸು ಮಾಡಿ ಒಂದು ದಿನದೊಳಗೆ ಹಳ್ಳಿಗೆ ಹೋಗುವವರು ಹೋಗಿ ಎಂದರು.

ಬಡವರ ಅನ್ನದಲ್ಲಿ ರಾಜಕೀಯ ಮಾಡಬೇಕಾ?

ಪ್ರಧಾನಮಂತ್ರಿಗಳು 21 ದಿನಗಳಲ್ಲಿ ಈ ಯುದ್ಧ ಗೆಲ್ಲುತ್ತೇವೆ ಅಂತಾ ಹೇಳಿದ್ದರೂ ನಾವು ಸಹಕಾರ ನೀಡುತ್ತಲೇ ಬಂದಿದ್ದೇವೆ. ಆದರೆ ಆಡಳಿತರೂಢ ಬಿಜೆಪಿಯವರು ವಿವಿಧ ಇಲಾಖೆಗಳು, ಅಕ್ಷಯ ಪಾತ್ರೆಯವರು, ಇನ್ಫೋಸಿಸ್ ಸಂಸ್ಥೆಯವರು ಜನರಿಗೆ ಕೊಟ್ಟ ಆಹಾರ ಕಿಟ್ ಗಳ ಮೇಲೆ ತಮ್ಮ ಫೋಟೋ ಹಾಕಿಕೊಂಡು ಹಂಚಿದಿರಲ್ಲಾ… ಯಾವ ವ್ಯವಸ್ಥೆಯಲ್ಲಿ ಈ ಸರ್ಕಾರ ನಡೆಯುತ್ತಿದೆ. ಆನೇಕಲ್ ನಲ್ಲಿ ಬಾಣಂತಿಯರು, ಮಕ್ಕಳ ಪೌಷ್ಠಿಕ ಆಹಾರ ಕಿಟ್ ಮೇಲೆ ಬಿಜೆಪಿ ಚಿಹ್ನೆ ಹಾಕಿ ಅಕ್ರಮ ಮಾಡಿದರಲ್ಲ ಇವರ ವಿರುದ್ಧ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ..? ಇದು ಒಂದು ಸರ್ಕಾರನಾ?

ನಾವು ರಾಜಕಾರಣ ಮಾಡಬೇಕು, ಮಾಡೋಣ. ಆದರೆ ಕೋವಿಡ್  ಸಂಕಷ್ಟದ  ಸಮಯದಲ್ಲೂ ಬಡವರಿಗೆ ಹಂಚುವ ಆಹಾರದಲ್ಲೂ ರಾಜಕಾರಣ ಮಾಡಬೇಕಿತ್ತಾ? ಬಡವರು ತಿನ್ನುವ ಆಹಾರದಲ್ಲಿ ಪ್ರಚಾರ ಪಡೆದು ಮತ ಕೇಳಬೇಕಾ? ವಿರೋಧ ಪಕ್ಷದವರು ಅಕ್ರಮದ ಬಗ್ಗೆ ಆರೋಪ ಮಾಡಿದಾಗ ನೀವು ಕ್ರಮ ಜರುಗಿಸಲಿಲ್ಲ ಎಂದರೆ, ಈ ಅಕ್ರಮದಲ್ಲಿ ನೀವೂ ಭಾಗಿಯಾಗಿದ್ದೀರಿ ಎಂಬುದನ್ನು ತೋರಿಸುತ್ತದೆ.

ಎಷ್ಟು ರೈತರಿಗೆ ನೆರವಾಗಿದ್ದೀರಿ?

ಎಷ್ಟು ರೈತರ ಬೆಳೆ ಖರೀದಿ ಮಾಡಿದ್ದೀರಿ, ಎಷ್ಟು ರೈತರಿಗೆ ಮಾರುಕಟ್ಟೆ ಕಲ್ಪಿಸಿದ್ದೀರಿ, ಎಷ್ಟು ರೈತರಿಗೆ ಪರಿಹಾರ ಕಲ್ಪಿಸಿಕೊಟ್ಟಿದ್ದೀರಿ? ಕೃಷಿ ಸಚಿವರು ಉತ್ತರ ನೀಡಲಿ. ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆಯಾಗಲು ಬಿಡಲ್ಲ ಅಂತಾ ಯಡಿಯೂರಪ್ಪನವರು ಹೇಳಿಕೆ ನೀಡಿದರು. ಆದೇಶ ಹೊರಡಿಸಿದರು. ಆದರೆ ಎಷ್ಚು ಅಧಿಕಾರಿಗಳು ಹೋಗಿ ಬೆಳೆ ನಷ್ಟದ ಸಮೀಕ್ಷೆ ಮಾಡಿದ್ದಾರೆ?

ಕಾರ್ಮಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಲಿಲ್ಲ:

ಈ ಸರ್ಕಾರ ರೈತರು, ಕಾರ್ಮಿಕರನ್ನು ರಕ್ಷಿಸುವಲ್ಲೂ ವಿಫಲವಾಯಿತು. ಕಾರ್ಮಿಕರಿಗೆ ಮೂರು ಪಟ್ಟು ಬಸ್ ದರ ಏರಿಕೆ ವಿರುದ್ಧ ನಾವು ಹೋರಾಟ ಮಾಡಿದ ಮೇಲೆ ದೊಡ್ಡ ಮನಸ್ಸು ಮಾಡಿ ಅವರಿಗೆ ಐದು ದಿನಗಳ ಕಾಲ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಯಿತು. ಈ ಕಠಿಣ ಸಮಯದಲ್ಲಿ ನಮ್ಮ ಹೃದಯ ಜನರಿಗಾಗಿ ಮಿಡಿಯುತ್ತಿದೆ. ಸರ್ಕಾರದ ಬೇಜವಾಬ್ದಾರಿಯಿಂದ ಈ ಕಾಯಿಲೆ ಹರಡಿದೆ. ಹೊರ ದೇಶದಿಂದ ಬರುವವರನ್ನು ಮುಂಚಿತವಾಗಿಯೇ ತಡೆದಿದ್ದರೆ, ಇವತ್ತು ಇಷ್ಟು ತೊಂದರೆ ಆಗುತಿತ್ತಾ? ನಿಮ್ಮ ಬೇಜವಾಬ್ದಾರಿ ತನಕ್ಕೆ ಇಡೀ ದೇಶ ನರಳುವಂತಾಗಿದೆ.

ಸರ್ಕಾರ ಘೋಷಣೆ ಮಾಡಿದ ಪ್ಯಾಕೇಜ್ ಎಷ್ಟು ಜನಕ್ಕೆ ತಲುಪಿದೆ? ಈ ಬಗ್ಗೆ ಮಾಹಿತಿ ಪಡೆಯೋಣ ಎಂದರೆ ಕಾರ್ಮಿಕ ಸಚಿವರು ಇಲ್ಲಿ ಇಲ್ಲ. ಇವತ್ತಿನವರೆಗೂ ಶೇ.10-20 ರಷ್ಟು ಜನರಿಗೆ ಈ ಪರಿಹಾರ ಹಣ ತಲುಪಿಲ್ಲಸರ್ಕಾರ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿದ್ದರೆ, ಕಾರ್ಮಿಕರು ಯಾಕೆ ತಮ್ಮ ಊರಿಗೆ ವಾಪಸ್ ತೆರಳುತ್ತಿದ್ದರು.

ಈ ಸರ್ಕಾರಕ್ಕೆ ಕೊನೇ ಪಕ್ಷ ವೃದ್ಧರಿಗೆ, ವಿಧವೆಯರಿಗೆ, ವಿಶೇಷಚೇತನರಿಗೆ ಪಿಂಚಣಿ ನೀಡಲು ಸಾಧ್ಯವಾಗಿಲ್ಲ. ಅದನ್ನು ನೀಡಲು ಈಗ ಕೆ1, ಕೆ2 ಅಂತಾ ಏನೇನೋ ವಿಂಗಡಣೆ ಮಾಡಿದ್ದಾರೆ. 20, 30 ವರ್ಷಗಳಿಂದ 500, 1000 ರೂಪಾಯಿ ಕೊಡಲಾಗುತ್ತಿದೆ. ಇದನ್ನು ನೀಡುವುದರಲ್ಲೂ ರಾಜಕೀಯ ಮಾಡಬೇಕಾ?

ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡದಿರುವುದೂ ಒಂದು ಸಂಸ್ಕೃತಿನಾ?

ಆದರೆ ಈ ಸರ್ಕಾರ ಏನು ಮಾಡುತ್ತಿದೆ. ಬಡವರು ತಿನ್ನುವ ಅನ್ನದಲ್ಲಿ ಅಕ್ರಮ ಮಾಡುತ್ತಿದೆ. ಹೆಣದ ಮೇಲೆ ಹಣ ಮಾಡಲು ಹೊರಟಿರುವುದು ಒಂದು ಸರ್ಕಾರವೇ? ಈ ಸರ್ಕಾರದ ಅಕ್ರಮವನ್ನು ನಾವು ನೋಡಿಕೊಂಡು ಸುಮ್ಮನಿರಬೇಕಾ? ಎಷ್ಟು ದಿನ ನಾವು ತಾಳ್ಮೆಯಿಂದ ಇರಬೇಕು. ಮಾಧ್ಯಮಗಳು ಪ್ರತಿ ವಿಚಾರವನ್ನು ಪ್ರಕಟಿಸಿವೆ. ಕೊರೋನಾದಿಂದ ಸತ್ತವರ ಹೆಣಕ್ಕೆ ಒಂದು ಒಳ್ಳೆಯ ಅಂತ್ಯ ಸಂಸ್ಕಾರ ಮಾಡಲು ನಿಮ್ಮಿಂದ ಸಾಧ್ಯವಾಗಲಿಲ್ಲ. ಇದು ಯಾವ ಸಂಸ್ಕೃತಿ? ಎಂದು ಡಿಕೆ ಶಿವಕುಮಾರ್ ಹರಿಹಾಯ್ದಿದ್ದಾರೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್ ಓಡಿಸಲು ಸಿಎಂ ನವಸೂತ್ರ

ಕೋವಿಡ್ ಓಡಿಸಲು ಸಿಎಂ ನವಸೂತ್ರ

iplIPL 2020 : ಆರ್‌ಸಿಬಿ – ಮುಂಬೈ ಕಾದಾಟ : ಮುಂಬೈಗೆ 5 ವಿಕೆಟ್ ಗಳ ಜಯ

IPL 2020 : ಎಡವಿದ ಆರ್‌ಸಿಬಿ; ಪ್ಲೇ ಆಫ್‌ಗೆ ಲಗ್ಗೆಯಿಟ್ಟ ಮುಂಬೈ

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ಬಿಹಾರ್ ಟು ಬಾಲಿವುಡ್ ರೈತನ ಮಗ “Gangs of wasseypur” ನ ಸುಲ್ತಾನ್ ನಾಗಿ ಬೆಳೆದ ರೋಚಕ ಹಾದಿ

ಬಿಹಾರ್ ಟು ಬಾಲಿವುಡ್ ರೈತನ ಮಗ “Gangs of wasseypur” ನ ಸುಲ್ತಾನ್ ನಾಗಿ ಬೆಳೆದ ರೋಚಕ ಹಾದಿ

STUDIO

ಬಂಟ್ವಾಳ: ಸ್ಟುಡಿಯೋಗೆ ನುಗ್ಗಿ ದುಷ್ಕರ್ಮಿಗಳಿಂದ ಹಲ್ಲೆ

ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಒಟ್ಟು ಶೇ.70.11ರಷ್ಟು ಮತದಾನ

ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಒಟ್ಟು ಶೇ.70.11ರಷ್ಟು ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ಓಡಿಸಲು ಸಿಎಂ ನವಸೂತ್ರ

ಕೋವಿಡ್ ಓಡಿಸಲು ಸಿಎಂ ನವಸೂತ್ರ

ಜಿಲ್ಲೆಯಲ್ಲಿ ಇಳಿಕೆ ಕಂಡ ಕೋವಿಡ್ ! 79 ಮಂದಿಗೆ ಸೋಂಕು ದೃಢ, 89 ಮಂದಿ ಗುಣಮುಖ

ಮಂಡ್ಯ ಜಿಲ್ಲೆಯಲ್ಲಿ ಇಳಿಕೆ ಕಂಡ ಕೋವಿಡ್ ! 79 ಮಂದಿಗೆ ಸೋಂಕು ದೃಢ, 89 ಮಂದಿ ಗುಣಮುಖ

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಚಾಮರಾಜನಗರ ಜಿಲ್ಲೆಯ ಬಂಗಾರಾಚಾರ್ ಮತ್ತು ಡಾ.ರಾಮಕೃಷ್ಣ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಚಾಮರಾಜನಗರ ಜಿಲ್ಲೆಯ ಬಂಗಾರಾಚಾರ್ ಮತ್ತು ಡಾ.ರಾಮಕೃಷ್ಣ ಅವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

ಆನ್ ಲೈನ್ ಶಿಕ್ಷಣದ ಅವಧಿ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ : ಸುರೇಶ್ ಕುಮಾರ್

ಆನ್ ಲೈನ್ ಶಿಕ್ಷಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ:ಗೈಡ್ ಲೈನ್ಸ್ ನಲ್ಲಿ ಏನಿದೆ?

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

ಹೊಸ ಸೇರ್ಪಡೆ

ಕೋವಿಡ್ ಓಡಿಸಲು ಸಿಎಂ ನವಸೂತ್ರ

ಕೋವಿಡ್ ಓಡಿಸಲು ಸಿಎಂ ನವಸೂತ್ರ

ಹಿಂಗಾರು ಪ್ರವೇಶ; ಕರಾವಳಿಯಲ್ಲಿ ಮಂಜಿನ ವಾತಾವರಣ

ಹಿಂಗಾರು ಪ್ರವೇಶ; ಕರಾವಳಿಯಲ್ಲಿ ಮಂಜಿನ ವಾತಾವರಣ

iplIPL 2020 : ಆರ್‌ಸಿಬಿ – ಮುಂಬೈ ಕಾದಾಟ : ಮುಂಬೈಗೆ 5 ವಿಕೆಟ್ ಗಳ ಜಯ

IPL 2020 : ಎಡವಿದ ಆರ್‌ಸಿಬಿ; ಪ್ಲೇ ಆಫ್‌ಗೆ ಲಗ್ಗೆಯಿಟ್ಟ ಮುಂಬೈ

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಉಳ್ಳಾಲ, ಬಂಟ್ವಾಳದಲ್ಲಿಯೂ ಕಸ ವಿಂಗಡಣೆಗೆ ಪಾಲಿಕೆಯಿಂದ ಸೂಚನೆ

ಉಳ್ಳಾಲ, ಬಂಟ್ವಾಳದಲ್ಲಿಯೂ ಕಸ ವಿಂಗಡಣೆಗೆ ಪಾಲಿಕೆಯಿಂದ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.