ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್‌ ಮಿತ್ರ’ರು

ನೈಸರ್ಗಿಕ ವಿಕೋಪದ ಸಂದರ್ಭ ರಕ್ಷಣೆಗೆ ಧಾವಿಸುವ ಸ್ವಯಂ ಸೇವಕರು ; ರಾಜ್ಯದ 11 ಜಿಲ್ಲೆಗಳು ಆಯ್ಕೆ

Team Udayavani, May 23, 2022, 7:05 AM IST

ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್‌ ಮಿತ್ರ’ರು

ಬೆಂಗಳೂರು: ರಾಜ್ಯದಲ್ಲಿ ನೆರೆ ಸಹಿತ ಯಾವುದೇ ರೀತಿಯ ನೈಸರ್ಗಿಕ ವಿಪತ್ತುಗಳ ನಿರ್ವಹಣೆಗೆ ಈಗ ಸ್ಥಳೀಯ ಮಟ್ಟದಲ್ಲೇ ಸ್ವಯಂಸೇವಕರ ತಂಡಗಳು ಸಿದ್ಧಗೊಳ್ಳುತ್ತಿವೆ. ಮುಂಬರುವ ದಿನಗಳಲ್ಲಿ ಸಂಕಷ್ಟಕ್ಕೆ ಸಿಲುಕಬಹು ದಾದ ಆ ತಂಡಗಳೇ ಜನರ ಪಾಲಿಗೆ “ಆಪತ್ತು ಮಿತ್ರ’ (ಆಪದ್‌ ಮಿತ್ರ)ರಾಗಿ ಧಾವಿಸಲಿವೆ.

ಪದೇಪದೆ ನೆರೆ ಅಥವಾ ಮತ್ತಿತರ ನೈಸರ್ಗಿಕ ವಿಪತ್ತುಗಳಿಗೆ ತುತ್ತಾಗುವ ದೇಶದ 350 ಜಿಲ್ಲೆಗಳನ್ನು ಕೇಂದ್ರದ ಮಹತ್ವಾಕಾಂಕ್ಷಿ “ಆಪದ್‌ ಮಿತ್ರ’ ಯೋಜನೆಯಡಿ ಗುರುತಿಸಲಾಗಿದೆ. ಆ ಪಟ್ಟಿಯಲ್ಲಿ ರಾಜ್ಯದ 11 ಜಿಲ್ಲೆಗಳ ಸುಮಾರು 208 ಗ್ರಾಮಗಳು ಇವೆ. ಅಲ್ಲೆಲ್ಲ ಪ್ರಕೃತಿ ವಿಕೋಪಗಳಿಗೆ ತ್ವರಿತವಾಗಿ ಸ್ಪಂದಿಸಲು ಸಮುದಾಯ ಮಟ್ಟದ ಸ್ವಯಂ ಸೇವಕರನ್ನು ಸಿದ್ಧಗೊಳಿಸಲು ಸರಕಾರ ಮುಂದಾಗಿದೆ.

3,400 ಸ್ವಯಂಸೇವಕರು
ದೇಶಾದ್ಯಂತ ಒಟ್ಟಾರೆ ಒಂದು ಲಕ್ಷ ಇಂತಹ ಸ್ವಯಂಸೇವಕರನ್ನು ಸಜ್ಜುಗೊಳಿಸುವ ಗುರಿ ಇದ್ದು, ಈ ಪೈಕಿ ರಾಜ್ಯದಲ್ಲಿ 11 ಜಿಲ್ಲೆಗಳಿಂದ ತಲಾ 300ರಿಂದ 350ರಂತೆ 3,400 ಸ್ವಯಂಸೇವಕರನ್ನು ತಯಾರು ಮಾಡಲಾಗುತ್ತಿದೆ. ಈಗಾಗಲೇ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಗೃಹ ರಕ್ಷಕ ಸಿಬಂದಿ, ಸಿವಿಲ್‌ ಡಿಫೆನ್ಸ್‌, ಸ್ಥಳೀಯ ಪೊಲೀಸರು ಹಾಗೂ ಯುವಕರು ಇದರಲಿದ್ದಾರೆ. ಅವರೆಲ್ಲರಿಗೆ 12 ದಿನಗಳ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಮಾಸಾಂತ್ಯಕ್ಕೆ ತರಬೇತಿ ಆರಂಭವಾಗಲಿದೆ ಎಂದು ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ)ಯ ರಾಜ್ಯ ತುರ್ತು ನಿರ್ವಹಣ ಕೇಂದ್ರದ ಅಧಿಕಾರಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಸಂತ್ರಸ್ತರನ್ನು ಹೇಗೆ ಕಾಪಾಡಬೇಕು? ಒಂದು ವೇಳೆ ನೆರವಿಗೆ ಧಾವಿಸಿದಾಗ ತಾವೇ ಅಪಾಯದಲ್ಲಿ ಸಿಲುಕಿದರೆ ಪಾರಾಗುವುದು ಹೇಗೆ? ಈ ಕಾರ್ಯಾಚರಣೆಗೆ ಅನುಸರಿಸುವ ಕ್ರಮಗಳು ಯಾವುವು ಮುಂತಾದ ಹಲವು ಅಂಶಗಳ ಬಗ್ಗೆ ತರಬೇತಿ ನೀಡಲಾಗುತ್ತದೆ.

ಪ್ರಸ್ತುತ ವ್ಯವಸ್ಥೆಯಲ್ಲಿ ಯಾವುದೇ ಘಟನೆಗಳು ಸಂಭವಿಸಿದರೆ, ಬೆಂಗಳೂರಿನಂತಹ ದೂರದ ಊರಿನಿಂದ ವಿಪತ್ತು ನಿರ್ವಹಣ ಪಡೆ ಧಾವಿಸುತ್ತದೆ. ಇದಕ್ಕೆ ಸಾಕಷ್ಟು ಸಮಯ ಹಿಡಿಯುತ್ತದೆ. ಕೆಲವೇ ನಿಮಿಷಗಳಲ್ಲಿ ಸ್ಪಂದಿಸುವ ಮೂಲಕ ಅನಾಹುತದ ಪ್ರಮಾಣ ತಗ್ಗಿಸಲು ಈ “ಆಪತ್ತು ಮಿತ್ರ’ರನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಆಪತ್ತು ಮಿತ್ರ’ರಿಗೆ ಜೀವ ವಿಮಾ ಸೌಲಭ್ಯ
ಜತೆಗೆ ಆಯ್ಕೆ ಮಾಡಲಾದ ಪ್ರತೀ ಜಿಲ್ಲೆಗೆ ತಲಾ 20 ಲಕ್ಷ ರೂ. ಅನ್ನು ಸುರಕ್ಷಾ ಉಪಕರಣಗಳ ಖರೀದಿಗೆ ನೀಡಲಾಗುತ್ತದೆ. ಇದರಲ್ಲಿ ಪ್ರತೀ ಸ್ವಯಂಸೇವಕನಿಗೆ ತಲಾ ಹತ್ತು ಸಾವಿರ ರೂ. ಮೊತ್ತದಲ್ಲಿ ಕೈಗವಸು, ಕಾಲುಗವಸು, ಗರಗಸ, ಪಿಕ್ಕಾಸು, ಹಗ್ಗ ಮತ್ತಿತರ ಉಪಕರಣಗಳ ಕಿಟ್‌ ಹಾಗೂ ಗುರುತಿನ ಚೀಟಿ ಇರುತ್ತದೆ. ಜತೆಗೆ ಪ್ರತಿಯೊಬ್ಬರಿಗೂ ಜೀವ ವಿಮಾ ಸೌಲಭ್ಯ ಕಲ್ಪಿಸಲಾಗಿರುತ್ತದೆ. ಒಂದು ವೇಳೆ ಅನಾಹುತಗಳು ಸಂಭವಿಸಿದರೆ, ಅವಲಂಬಿತ ಕುಟುಂಬಕ್ಕೆ ಪರಿಹಾರ ಕಲ್ಪಿಸಲಾಗುವುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಮಟ್ಟದಲ್ಲೇ ಸ್ವಯಂಸೇವಕರನ್ನು ತಯಾರು ಮಾಡುವುದರಿಂದ ಅನಾಹುತದ ಪ್ರಮಾಣ ತಗ್ಗಿಸಬಹುದು. ರಾಜ್ಯದ 11 ಜಿಲ್ಲೆಗಳಿಗೆ ಸುಮಾರು 3,400 ಸ್ವಯಂಸೇವಕರು “ಆಪದ್‌ ಮಿತ್ರ’ದಡಿ ಆಯ್ಕೆ ಮಾಡಲಾಗುತ್ತಿದೆ. ಮಳೆಗಾಲ ಶುರುವಾಗುತ್ತಿದ್ದಂತೆ ಈ ಆಪತ್ತು ಮಿತ್ರರು ಸೇವೆಗೆ ಸನ್ನದ್ಧರಾಗುವ ಸಾಧ್ಯತೆ ಇದೆ.
– ಶ್ರೀನಿವಾಸ ರೆಡ್ಡಿ, ಹಿರಿಯ ಸಲಹೆಗಾರ, ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರ

– ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.