ಚಳ್ಳಕೆರೆ ಟೊಮೇಟೊಗೆ ಭಾರೀ ಬೇಡಿಕೆ


Team Udayavani, Aug 1, 2023, 6:04 AM IST

ಚಳ್ಳಕೆರೆ ಟೊಮೇಟೊಗೆ ಭಾರೀ ಬೇಡಿಕೆಚಳ್ಳಕೆರೆ ಟೊಮೇಟೊಗೆ ಭಾರೀ ಬೇಡಿಕೆ

 ಹಲವು ದಿನಗಳ ಕಾಲ ಕೊಳೆಯದೇ ಸಂಗ್ರಹಿಸಿಡಬಹುದಾದ ಟೊಮೇಟೊ

ಬೆಂಗಳೂರು: ರಾಜ್ಯದ ಅತಿದೊಡ್ಡ ಟೊಮೇಟೊ ಮಾರುಕಟ್ಟೆ ಎನಿಸಿರುವ ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಟೊಮೇಟೊ ಬೆಲೆ ಮತ್ತೆ ಜಿಗಿತ ಕಂಡಿದೆ. ಅದರಲ್ಲೂ ಚಳ್ಳಕೆರೆ ಭಾಗದಿಂದ ಪೂರೈಕೆ ಆಗುತ್ತಿರುವ, ಕೆಲವು ದಿನಗಳ ಕಾಲ ಸಂಗ್ರಹಿಸಿಡಬಹುದಾದ ಶ್ರೇಷ್ಠ ಗುಣಮಟ್ಟದ 15 ಕೆ.ಜಿ. ಬಾಕ್ಸ್‌ನ ಟೊಮೇಟೊ 2,200 ರೂ.ಗೆ ಮಾರಾಟವಾಗಿದೆ.

ಎರಡು ದಿನಗಳ ಹಿಂದೆ ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ 15 ಕೆ.ಜಿ. ಬಾಕ್ಸ್‌ ಟೊಮೇಟೊ 1,600ರಿಂದ 2,000 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ಮತ್ತೆ ಬಾಂಗ್ಲಾ ಗಡಿ ಪ್ರದೇಶಗಳಿಗೆ ಟೊಮೇಟೊ ಬೇಡಿಕೆ ಹೆಚ್ಚಿದೆ. ಜತೆಗೆ ಛತ್ತೀಸ್‌ಗಢ, ಪಶ್ಚಿಮ ಬಂಗಾಲ, ಉತ್ತರ ಪ್ರದೇಶ, ದಿಲ್ಲಿ ಸಹಿತ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಬೇಡಿಕೆ ಇರುವುದರಿಂದ ಈಗ ರಾಜ್ಯದ ಮಾರುಕಟ್ಟೆಗಳಲ್ಲಿ ಟೊಮೇಟೊ ಬೆಲೆಗಳಲ್ಲಿ ಏರಿಕೆಯಾಗಿದೆ.

ಆಂಧ್ರಪ್ರದೇಶ ಮತ್ತು ತೆಲಂಗಾಣ ಭಾಗದಿಂ ದಲೂ ಕೆಲವು ದಿನಗಳಿಂದ ರಾಜ್ಯದ ಕೋಲಾರ ಮಾರುಕಟ್ಟೆಗೆ ಟೊಮೇಟೊ ಪೂರೈಕೆ ಆಗುತ್ತಿದೆ. ಆದರೆ ಅವು ಉತ್ತಮ ಗುಣಟ್ಟದಲ್ಲ, ಜತೆಗೆ ಬಹಳ ದಿನಗಳ ಕಾಲ ಸಂಗ್ರಹಿಸಿಟ್ಟುಕೊಳ್ಳಲು ಆಗುವುದಿಲ್ಲ. ಹೀಗಾಗಿ ಅವು 1,600ರೂ.ನಿಂದ 2000ರೂ. ವರೆಗೂ ಖರೀದಿ ಆಗುತ್ತಿವೆ ಎಂದು ಕೋಲಾರ ಎಪಿಎಂಸಿ ವ್ಯಾಪಾರಿಗಳು ಹೇಳುತ್ತಾರೆ.

ಬೆಳೆ ಕುಂಠಿತ
ಕೋಲಾರ ಮತ್ತು ಚಿಕ್ಕಬಳ್ಳಾಪುರ ಭಾಗದಲ್ಲಿ ಟೊಮೇಟೊ ಬೆಳೆಯಲ್ಲಿ ಬಿಳಿನೊಣದ ಹಾವಳಿ ಕಂಡುಬಂದಿದ್ದು ಬೆಳೆ ಕುಂಠಿತವಾಗಿದೆ.

ಬಾಕ್ಸ್‌ಗೆ 2,800ರಿಂದ
3000 ಸಾವಿರ ರೂ.
ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಟೊಮೇಟೊ ಬೆಲೆ ಈ ಹಿಂದೆ ಪ್ರತಿ ಕೆ.ಜಿಗೆ 120ರಿಂದ 130 ರೂ. ಇದ್ದುದು ಈಗ 150ರಿಂದ 160 ರೂ. ತಲುಪಿದೆ. ನಾಲ್ಕೈದು ದಿನಗಳಿಂದ ಮಾರುಕಟ್ಟೆಗಳಲ್ಲಿ ಬೆಲೆಯಲ್ಲಿ ಜಿಗಿತ ಕಂಡು ಬಂದಿದೆ. ಹೊಸ ಬೆಳೆ ಪೂರೈಕೆ ಆಗುವವರಿಗೂ ಇದೇ ಪರಿಸ್ಥಿತಿ ಇರಲಿದೆ ಎಂದು ವ್ಯಾಪಾರಿಗಳು ತಿಳಿಸುತ್ತಾರೆ.

-ದೇವೇಶ ಸೂರಗುಪ್ಪ

 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.