ಪರಿಹಾರ ಕಾರ್ಯದಲ್ಲೂ ರಾಜಕೀಯ ಸರಿಯಲ್ಲ

Team Udayavani, Aug 13, 2019, 3:00 AM IST

ಬೆಂಗಳೂರು: ಒನ್‌ ಮ್ಯಾನ್‌ ಶೋ ಅಥವಾ ಟೂ ಮ್ಯಾನ್‌ ಶೋ ಮುಖ್ಯವಲ್ಲ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ತಾವೇ ಮುಂದುನಿಂತು ಪರಿಹಾರ ಕಾಮಗಾರಿಗಳ ಉಸ್ತುವಾರಿ ವಹಿಸಿದ್ದಾರೆ. ಇಂತಹ ವಿಷಯದಲ್ಲಿ ರಾಜಕೀಯ ಸರಿಯಲ್ಲ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದರು.

ಮಲ್ಲೇಶ್ವರದ ಬಿಜೆಪಿ ಕಚೇರಿಯ ಮುಂಭಾಗ ಸೋಮವಾರ ಬೆಳಗ್ಗೆ ಚಿಕ್ಕೋಡಿ ಪ್ರವಾಹ ಪೀಡಿತ ಪ್ರದೇಶಕ್ಕೆ 10 ಟನ್‌ ಅಕ್ಕಿ ಮತ್ತು ಕುಡಿಯುವ ನೀರು ಸಹಿತವಾಗಿ ವಿವಿಧ ಸಾಮಗ್ರಿಗಳನ್ನು ಟ್ರಕ್‌ ಮೂಲಕ ಕಳುಹಿಸಿಕೊಟ್ಟ ನಂತರ ಮಾತನಾಡಿದ ಅವರು, ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಭೀಕರ ಪ್ರವಾಹ ಹಾಗೂ ಮಳೆಹಾನಿಯಾಗಿದೆ. ಈ ಹಂತದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಸೇರಿ ಯಾರೂ ರಾಜಕೀಯ ಮಾಡುವ ಅಗತ್ಯವಿಲ್ಲ.

ಪಕ್ಷಾತೀತವಾಗಿ ಎಲ್ಲರೂ ಕೈ ಜೋಡಿಸಬೇಕು. ನೆರೆ ಸಂತ್ರಸ್ತರಿಗೆ ನೆರವು ನೀಡುವ ಅಗತ್ಯವಿದೆ ಎಂದು ತಿಳಿಸಿದರು. ಇದೇ ವೇಳೆ ಬಿಜೆಪಿ ಯುವಮೋರ್ಚಾದ ವತಿಯಿಂದ ಮಲ್ಲೇಶ್ವರದ ಮಾರುಕಟ್ಟೆ ಪ್ರದೇಶಕ್ಕೆ ತೆರಳಿ ಅಂಗಡಿಗಳಲ್ಲಿ ನೆರೆ ಸಂತ್ರಸ್ತರಿಗಾಗಿ ವಿವಿಧ ವಸ್ತು ಮತ್ತು ನಿಧಿ ಸಂಗ್ರಹ ಮಾಡಲಾಯಿತು. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಯುವಮೋಚಾ ಪ್ರಧಾನ ಕಾರ್ಯದರ್ಶಿ ತಮ್ಮೇಶ್‌ ಗೌಡ, ಬೆಂಗಳೂರು ಮಹಾನಗರ ಯುವಮೋರ್ಚಾ ಅಧ್ಯಕ್ಷ ಸಪ್ತಗಿರಿಗೌಡ ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ