ಸಂವಿಧಾನ ಬದಲಾವಣೆ ಪ್ರಶ್ನೆಯೇ ಇಲ್ಲ: ಬಿಎಸ್‌ವೈ

Team Udayavani, May 12, 2019, 3:00 AM IST

ಹುಬ್ಬಳ್ಳಿ: ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರು ಇಡೀ ಪ್ರಪಂಚಕ್ಕೆ ಅಚ್ಚರಿ ತರುವಂತಹ ಸಂವಿಧಾನ ನೀಡಿದ್ದಾರೆ. ಅದನ್ನು ಬದಲು ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಕುಂದಗೋಳ ತಾಲೂಕಿನ ಕೂಬಿಹಾಳ ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿಗಳಾಗುತ್ತಿವೆ. ಆದರೆ, ಸಂವಿಧಾನ ಬದಲಾವಣೆ ಅಸಾಧ್ಯದ ಮಾತು. ಅಂಬೇಡ್ಕರ್‌ ಅವರ ವಿಚಾರಧಾರೆಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ