ಶಾಸಕ ಸ್ಥಾನಕ್ಕೆ “ರಾಜೀನಾಮೆ” ನೀಡಲು ಯೋಚಿಸುತ್ತಿದ್ದೇನೆ : ರೇಣುಕಾಚಾರ್ಯ ಕಿಡಿ
ನನಗೆ ಅಧಿಕಾರಕ್ಕಿಂತ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ....
Team Udayavani, Jul 27, 2022, 6:37 PM IST
ಬೆಂಗಳೂರು : ನನಗೆ ವೈಯಕ್ತಿಕವಾಗಿ ಅಧಿಕಾರಕ್ಕಿಂತ ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ, ಆದ್ದರಿಂದ ನಮ್ಮ ಸರಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಮತ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜತೆ ಚರ್ಚಿಸಿ ಶಾಸಕ ಸ್ಥಾನಕ್ಕೆ “ರಾಜೀನಾಮೆ” ನೀಡಲು ಯೋಚಿಸುತ್ತಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಸರಕಾರದ ವಿರುದ್ಧವೇ ಆಕ್ರೋಶ ಹೊರ ಹಾಕಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆಯ ಕುರಿತು ಆಕ್ರೋಶ ಹೊರ ಹಾಕಿದ ಮಾಜಿ ಸಚಿವ, ಹೊನ್ನಾಳಿ ಶಾಸಕ ರೇಣುಕಾಚಾರ್ಯ, ”ಹಿಂದೂ ಸಮೂಹ ನಮ್ಮ ಮೇಲೆ ಇಟ್ಟಿರುವ ಭರವಸೆಯನ್ನ ಉಳಿಸಿಕೊಳ್ಳಲು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಾನು ಈ ಸರ್ಕಾರದಲ್ಲಿ ಮುಂದುವರೆಯುತ್ತೇನೆ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎನ್ನುವುದನ್ನು ಮತ್ತೊಮ್ಮೆ ಹೇಳುತ್ತೇನೆ” ಎಂದಿದ್ದಾರೆ.
”ಕೆಲ ದಿನಗಳ ಹಿಂದೆ ನನಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನೂ ಸಹ ನಮ್ಮ ಪೊಲೀಸ್ ಇಲಾಖೆ ಇದುವರೆಗೂ ಪತ್ತೆ ಹಚ್ಚಿಲ್ಲ ಎಂದು ಹೇಳಿಕೊಳ್ಳುವುದಕ್ಕೆ ನನಗೆ ಮುಜುಗರವಾಗುತ್ತದೆ. ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ” ಎಂದು ಹೇಳಿದ್ದಾರೆ.
”ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನೆಡೆಯುತ್ತಿದ್ದು, ರಾಜ್ಯದ ಉದ್ದಗಲಕ್ಕೆ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.ನಮ್ಮ ಸರ್ಕಾರ ಯೋಗಿ ಆದಿತ್ಯನಾಥ್ ಜಿ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಮ್ಮ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ.ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ?” ಎಂದು ಪ್ರಶ್ನಿಸಿದ್ದಾರೆ.
”ಪ್ರತಿ ಬಾರಿ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಿಂದ ಏನೂ ಪ್ರಯೋಜನವಿಲ್ಲ. ಹಿಂದೂ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳ ಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು” ಎಂದು ಗುಡುಗಿದ್ದಾರೆ.
ಜನರಿಗೆ ಬೇಕಾಗಿರುವುದು ನಮ್ಮ ಪೌರುಷದ ಭಾಷಣ ಅಥವಾ ಹೇಳಿಕೆಗಳಲ್ಲ, ನಾವು ತೆಗೆದುಕೊಳ್ಳುವ ನಿರ್ಧಾಕ್ಷಣ್ಯ ಕ್ರಮಗಳು ಎಂದು ಬಹಿರಂಗ ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್