ರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚು ವೈದ್ಯಕೀಯ ಸೀಟು ಕಲ್ಪಿಸಲು ಚಿಂತನೆ
Team Udayavani, Jun 6, 2019, 3:00 AM IST
ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟುಗಳು ಹೆಚ್ಚು ಲಭ್ಯವಾಗುವ ನಿಟ್ಟಿನಲ್ಲಿ ಕಾನೂನಿಗೆ ತಿದ್ದುಪಡಿ ತರುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಪ್ರಸ್ತುತ ನೀಟ್‌ನಡಿ ಅಖೀಲ ಭಾರತ ಕೋಟಾದಡಿ ಶೇ.15ರಷ್ಟು ಸೀಟು ಬಿಟ್ಟು ಕೊಡಬೇಕಾಗಿರುವ ಕಾರಣ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ದೊರಕುವ ಸೀಟುಗಳಲ್ಲಿ ಕಡಿಮೆಯಾಗುತ್ತಿದೆ.
ಹೊರ ರಾಜ್ಯದ ವಿದ್ಯಾರ್ಥಿಗಳು ನಮ್ಮ ರಾಜ್ಯಕ್ಕೆ ಬರಲು ಆಸಕ್ತಿ ತೋರುತ್ತಾರೆ. ಆದರೆ, ನಮ್ಮ ರಾಜ್ಯದ ವಿದ್ಯಾರ್ಥಿಗಳು ಹೊರ ರಾಜ್ಯಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಆದರೆ, ನಮ್ಮ ವಿದ್ಯಾರ್ಥಿಗಳಿಗೆ ಅಗತ್ಯವಾದಷ್ಟು ಸೀಟುಗಳು ನಮ್ಮಲ್ಲಿ ಲಭ್ಯವಾಗುತ್ತಿಲ್ಲ.
ಹೀಗಾಗಿ, ಹೆಚ್ಚು ಸೀಟು ಸಿಗುವ ಮಾರ್ಗೋಪಾಯಗಳನ್ನು ಹುಡುಕುವಂತೆ ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಂ ಅವರು ಸೂಚನೆ ನೀಡಿದ್ದಾರೆ. ಒಂದೆರಡು ದಿನಗಳಲ್ಲಿ ಆ ಕುರಿತು ಸಭೆ ನಡೆಯುವ ಸಾಧ್ಯತೆಯಿದೆ.
ತಮಿಳುನಾಡು, ನೀಟ್ ಅಡಿ ಅಖೀಲ ಭಾರತ ಕೋಟಾದ ಸೀಟುಗಳನ್ನು ಬಿಟ್ಟು ಕೊಡುವುದಿಲ್ಲ. ಆ ಮಾದರಿಯಲ್ಲಿ ಇಲ್ಲೂ ಏನಾದರೂ ಕಾನೂನಿಗೆ ತಿದ್ದುಪಡಿ ತಂದು ಕ್ರಮ ಕೈಗೊಳ್ಳಬಹುದೇ? ಎಂಬ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಚಳ್ಳಕೆರೆಯಲ್ಲಿ ಹನ್ಸ-ಎನ್ಜಿ ಯಶಸ್ವಿ ಪ್ರಯೋಗ; ಸಿಎಸ್ಐಆರ್, ಎನ್ಎಎಲ್ನಿಂದ ವಿಮಾನ ಸಿದ್ಧ
ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ
ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
ಮುಚ್ಚಿದ ಬಾಗಿಲಿನ ಹಿಂದೆ ಆರ್ಸಿಬಿ: ಗುಜರಾತ್ ಟೈಟಾನ್ಸ್ ವಿರುದ್ಧ ಇಂದು ಅಂತಿಮ ಪಂದ್ಯ
ನಾರ್ವೆ ಮಾಜಿ ಸಚಿವರ ಟ್ವಿಟರ್ನಲ್ಲಿ ಮರವಂತೆ ಚಿತ್ರ