ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ
ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Team Udayavani, Nov 6, 2021, 10:15 PM IST
ಬೆಂಗಳೂರು: ರಾಜಧಾನಿ ಬೆಂಗಳೂರು, ಮೈಸೂರು, ಕರಾವಳಿ ಭಾಗ ಹಾಗೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಆಂಧ್ರ ಪ್ರದೇಶದ ಮೂಲಕ ವಾಯುಭಾರ ಕುಸಿತದ ಮಾರುತಗಳು ಬೀಸುತ್ತಿವೆ. ಹೀಗಾಗಿ, ಮುಂದಿನ ಮೂರು ದಿನಗಳು ಮಳೆಯಾಗಲಿವೆ. ಭಾನುವಾರ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದ ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕಿ ಗೀತಾ ಅಗ್ನಿಹೋತ್ರಿ ತಿಳಿಸಿದ್ದಾರೆ.
ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನ.9 ಮತ್ತು 10ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ:ಬಂಟ್ವಾಳ: ಅತ್ಯಾಚಾರ ಎಸಗಿ, ಜೀವ ಬೆದರಿಕೆ; ಆರೋಪಿಗಳ ಬಂಧನ
ಚಳಿಗಾಲದ ಅನುಭವ
ತಂಪಾದ ಮೇಲ್ಮೆ„ ಸುಳಿಗಾಳಿ ಬೀಸುತ್ತಿರುವುದರಿಂದ ಡಿಸೆಂಬರ್‌ನಲ್ಲಿ ಆರಂಭವಾಗಬೇಕಿದ್ದ ಚಳಿಯ ವಾತಾವರಣ ನವೆಂಬರ್‌ನಲ್ಲಿಯೇ ಆಗಲಿದೆ. ಬಲವಾದ ತಂಪಾದ ಮೇಲ್ಮೈ ಗಾಳಿ ಬೀಸುತ್ತಿರುವುದರಿಂದ ಬೆಳಗಿನ ಜಾವ ಮತ್ತು ಸಂಜೆ ಶೀತಗಾಳಿ ವೇಗವಾಗಿ ಬೀಸಲಿದ್ದು, ಚಳಿಗಾಲದ ಅನುಭವವಾಗಲಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿಕ್ಷಕರ ಸಮಸ್ಯೆ-ಬೇಡಿಕೆಗಳ ಬಗ್ಗೆ ಸರಕಾರ ಉದಾಸೀನ ಮಾಡಬಾರದು: ಕುಮಾರಸ್ವಾಮಿ
ಪಿಎಸ್ಐ ಅಕ್ರಮ: ಇನ್ಸ್ಪೆಕ್ಟರ್ ಸೇರಿ ಇಬ್ಬರ ಬಂಧನ
ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ
ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್ ಪ್ರಕ್ರಿಯೆ ಆರಂಭವಾಗಿಲ್ಲ
ಮಲೆನಾಡಲ್ಲಿ ಹೊಸ ರಾಜಕೀಯ ಮನ್ವಂತರ : ಕಾಂಗ್ರೆಸ್ಗೆ ಬಣ ರಾಜಕೀಯ ಬಿಸಿ