ಟಿಕೆಟ್‌ ಇಕ್ಕಟ್ಟು; ಕೆಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳಿಂದ ಬಿಗಿಪಟ್ಟು

Team Udayavani, Mar 22, 2023, 7:35 AM IST

ಟಿಕೆಟ್‌ ಇಕ್ಕಟ್ಟು; ಕೆಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳಿಂದ ಬಿಗಿಪಟ್ಟು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಘೋಷಣೆಗೆ ಎಲ್ಲ ಪಕ್ಷಗಳೂ ಸಿದ್ಧತೆ ನಡೆಸುತ್ತಿರುವಂತೆಯೇ ಆಕಾಂಕ್ಷಿಗಳ ಎದೆಯಲ್ಲಿ ಢವ ಢವ ಆರಂಭವಾಗಿದೆ. ಕೆಲವು ಕಡೆಯಂತೂ ಟಿಕೆಟ್‌ ಆಕಾಂಕ್ಷಿಗಳು ಬಹಿರಂಗವಾಗಿಯೇ ತಮ್ಮ ಇಚ್ಛೆಯನ್ನು ಹೊರಹಾಕಿದ್ದಾರೆ.

ಕಾಂಗ್ರೆಸ್‌ನ ಮೊದಲ ಪಟ್ಟಿ ಗುರುವಾರ ಬಿಡುಗಡೆಯಾಗುತ್ತಿದ್ದರೆ, ಬಿಜೆಪಿಯಲ್ಲಿ ಟಿಕೆಟ್‌ಗಾಗಿ ಗುದ್ದಾಟ ಆರಂಭವಾಗುವ ಸುಳಿವು ಸಿಕ್ಕಿದೆ. ಇನ್ನು ಜೆಡಿಎಸ್‌ನಲ್ಲಿ ಕಳೆದ ಹಲವು ದಿನಗಳಿಂದ ನಡೆಯುತ್ತಿರುವ “ಹಾಸನ ಟಿಕೆಟ್‌ ತಿಕ್ಕಾಟ’ಕ್ಕೆ ಇನ್ನೂ ತೆರೆಬಿದ್ದಿಲ್ಲ.

ಶಿವಮೊಗ್ಗದಲ್ಲಿ ನಗರ ಕ್ಷೇತ್ರದ ಟಿಕೆಟ್‌ಗಾಗಿ ಕಾಯುತ್ತಿರುವುದಾಗಿ ಮಂಗಳವಾರ ಎಂಎಲ್‌ಸಿ ಆಯನೂರು ಮಂಜುನಾಥ್‌ ಅವರು ಬಹಿರಂಗವಾಗಿಯೇ ಘೋಷಿಸಿದ್ದಾರೆ. ಅಲ್ಲದೆ ಈಶ್ವರಪ್ಪ ಅವರಿಗೆ 35 ವರ್ಷದಿಂದ ಒಂದೇ ಕ್ಷೇತ್ರದಲ್ಲಿ ಅವಕಾಶ ನೀಡಲಾಗಿದೆ. ಈ ಬಾರಿ ನನಗೆ ಅವಕಾಶ ಸಿಗುತ್ತದೆ ಎಂಬ ವಿಶ್ವಾಸವಿದೆ. ಈಶ್ವರಪ್ಪ ಈಗ ಅವರ ಮಗನಿಗೆ ಟಿಕೆಟ್‌ ಕೇಳುತ್ತಿದ್ದಾರೆ. ಆದರೆ ಆತ ಇನ್ನೂ ಚಿಕ್ಕವನು. ಮಧ್ಯದಲ್ಲಿ ನಾನೊಬ್ಬ ಇದ್ದೇನೆ ಎಂದು ಹೇಳಿದ್ದೇನೆ ಎಂದಿದ್ದಾರೆ. ಈ ಬಾರಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ನನಗೆ ಟಿಕೆಟ್‌ ಕೊಡಿ ಎಂದು ಕೇಳಿದ್ದೇನೆ. ನಾನು ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಟಿಕೆಟ್‌ ನೀಡಿ ಎಂದು ಕೇಳಿಲ್ಲ. ಈಶ್ವರಪ್ಪ ಮತ್ತು ಬಿಜೆಪಿ ನಡುವೆ ನಾನು ಉರಿಗೌಡನೂ ಅಲ್ಲ, ನಂಜೇಗೌಡನೂ ಅಲ್ಲ. ನಾನು ಆಯನೂರು ಮಂಜುನಾಥ್‌. ಈ ಬಾರಿ ಜನಪ್ರತಿನಿಧಿ ಯಾಗಬೇಕು ಎಂಬ ಉತ್ಕಟ ಆಸೆಯಿದೆ ಎಂದೂ ಹೇಳಿದ್ದಾರೆ.

ಮತ್ತೊಂದೆಡೆ ಅಥಣಿ ಕ್ಷೇತ್ರದಿಂದ ಕಣಕ್ಕಿಳಿಯಲು ಮಾಜಿ ಡಿಸಿಎಂ, ವಿಧಾನಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಮುಂದಾಗಿದ್ದಾರೆ. ಕಳೆದ ಬಾರಿ ವರಿಷ್ಠರ ಸೂಚನೆಯಂತೆ ಇನ್ನೊಬ್ಬರಿಗೆ ಟಿಕೆಟ್‌ ಬಿಟ್ಟು ಕೊಟ್ಟಿದ್ದೆ. ಈ ಬಾರಿ ಕ್ಷೇತ್ರದ ಜನರು ಸ್ಪರ್ಧೆ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ. ಹೀಗಾಗಿ 27ರೊಳಗೆ ಸಭೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸುತ್ತೇನೆ. ಇನ್ನೊಬ್ಬರ ಸ್ಪರ್ಧೆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

ಸೋಮಣ್ಣಗೆ
ಗೋ ಬ್ಯಾಕ್‌ ಎಚ್ಚರಿಕೆ
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರಿಗೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಚುನಾವಣ ಉಸ್ತುವಾರಿ ನೀಡಬಾರದು ಹಾಗೂ ಚಾಮರಾಜನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು. ನೀಡಿದರೆ ಸೋಮಣ್ಣ ಗೋ ಬ್ಯಾಕ್‌ ಚಳವಳಿ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾ ವಕ್ತಾರ ಅಯ್ಯನಪುರ ಶಿವಕುಮಾರ್‌ ಎಚ್ಚರಿಸಿದ್ದಾರೆ. ಇದರ ನಡು ವೆಯೇ, ತಾವು ಸಿದ್ದರಾಮಯ್ಯ ವಿರುದ್ಧ ವರು ಣಾದಲ್ಲಿ ಸ್ಪರ್ಧೆ ಮಾಡುವುದಿಲ್ಲ, ಚಾಮರಾಜ ನಗರಕ್ಕೆ ಹೋಗಿ ಕೆಲಸ ಮಾಡುವೆ ಎಂದು ಸಚಿವ ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.

ದೊಡ್ಡಗೌಡರ ಜತೆ ಮಾತುಕತೆ
ಹಾಸನ ಅಖಾಡದಲ್ಲಿ ಆರಂಭವಾಗಿರುವ ಜೆಡಿಎಸ್‌ ಹಗ್ಗಜಗ್ಗಾಟಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ಕ್ಷೇತ್ರದ ಟಿಕೆಟ್‌ ಭವಾನಿ ರೇವಣ್ಣ ಅವರಿಗೋ ಕಾರ್ಯಕರ್ತ ಸ್ವರೂಪ್‌ ಅವರಿಗೋ ಎಂಬ ಪ್ರಶ್ನೆಗೆ ಉತ್ತರ ಸಿಗದೇ ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದಾರೆ. ಇದರ ಮಧ್ಯೆ ಮಂಗಳವಾರ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, “ಹಾಸನ ಟಿಕೆಟ್‌ ಗೊಂದಲಕ್ಕೆ ನಾನೇ ತೆರೆ ಎಳೆಯುತ್ತೇನೆ’ ಎಂದಿದ್ದು, ದೇವೇಗೌಡರ ನಿವಾಸಕ್ಕೆ ಆಗಮಿಸಿ ಚರ್ಚೆಯನ್ನೂ ನಡೆಸಿದ್ದಾರೆ. ಮುಂದಿನ ವಾರವೇ ಹಾಸನ ಅಭ್ಯರ್ಥಿಯ ಹೆಸರು ಘೋಷಣೆಯಾಗಲಿದೆ ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಟಾಪ್ ನ್ಯೂಸ್

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.