ಡಾ.ಹೆಗ್ಗಡೆ ಪಟ್ಟಾಭಿಷೇಕದ 52ನೇ ವರ್ಧಂತ್ಯುತ್ಸವ ನಾಳೆ
Team Udayavani, Oct 23, 2019, 3:00 AM IST
ಬೆಳ್ತಂಗಡಿ: ಚತುರ್ವಿಧ ದಾನಕ್ಕಾಗಿ ನಾಡಿನೆಲ್ಲೆಡೆ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 52ನೇ ವರ್ಧಂತ್ಯುತ್ಸವು ಅ.24ರಂದು ಜರುಗಲಿದೆ.
ಪಟ್ಟಾಭಿಷೇಕ ಪ್ರಯುಕ್ತ ಅ.24ರಂದು ಸಂಜೆ 4ಗಂಟೆಗೆ ಧರ್ಮಸ್ಥಳ ಶ್ರೀ ಮಹೋತ್ಸವ ಸಭಾಭವನದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ವಹಿಸಲಿದ್ದಾರೆ. 1968ರ ಅ.24ರಂದು ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ಡಾ| ಹೆಗ್ಗಡೆಯವರು ಪಟ್ಟಾಭಿಷಿಕ್ತರಾದರು.