ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ
Team Udayavani, Jan 21, 2022, 7:30 AM IST
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್ ಶೇ. 99.9 ಗುರಿ ಸಾಧಿಸುವ ಮೂಲಕ ರಾಜ್ಯವಾರು ಸಾಧನೆ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನಲ್ಲಿದೆ.
15 ವರ್ಷ ಮೇಲ್ಪಟ್ಟ 5.9 ಕೋಟಿ ಮಂದಿಗೆ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, ದೇಶದಲ್ಲೇ ನಾವು ಮುಂಚೂಣಿಯಲ್ಲಿದ್ದೇವೆ ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ಟ್ವೀಟ್ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯಾದ್ಯಂತ ಒಟ್ಟು 5,09,33,536 ಮಂದಿಗೆ ಮೊದಲ ಡೋಸ್ ಹಾಗೂ 4,13,15,765 ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದು, ಆ ಮೂಲಕ ಒಟ್ಟು 9.26 ಕೋಟಿ ಡೋಸ್ ಲಸಿಕೆ ವಿತರಿಸಿದಂತಾಗಿದೆ. 3.85 ಲಕ್ಷ ಮಂದಿ ಕೊರೊನಾ ಮುನ್ನೆಚ್ಚರಿಕೆ ಡೋಸ್ ಪಡೆದುಕೊಂಡಿದ್ದಾರೆ. 15ರಿಂದ 17 ವರ್ಷದೊಳಗಿನ 2.8 ಲಕ್ಷ ಮಕ್ಕಳು ಕೊವ್ಯಾಕ್ಸಿನ್ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ.
ನಾಲ್ಕು ಕೋಟಿಗಿಂತ ಹೆಚ್ಚು ಮಂದಿಗೆ ಮೊದಲ ಡೋಸ್ ಲಸಿಕೆ ವಿತರಿಸಲಾಗಿದೆ. ಆ ಮೂಲಕ ಶೇ. 100ರ ಗುರಿ ಸಾಧನೆ ಸಮೀಪಿಸುತ್ತಿದೆ. ಅತ್ಯಧಿಕ ಜನಸಂಖ್ಯೆ ಹೊಂದಿರುವ ರಾಜ್ಯಗಳಲ್ಲಿ ಕೊರೊನಾ ಮೊದಲ ಡೋಸ್ ವಿತರಣೆಯಲ್ಲಿ ಶೇ.100 ಗುರಿ ಸಾಧಿಸಿ ಮೊದಲ ರಾಜ್ಯ ಎನ್ನುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು