ಪ್ರವಾಸೋದ್ಯಮ ಇಲಾಖೆಯಿಂದ ಕಂಬಳಕ್ಕೆ ಉಡುಗೊರೆ: 1 ಕೋಟಿ ರೂ. ಸಹಾಯಧನ ಬಿಡುಗಡೆ
Team Udayavani, Mar 18, 2021, 4:29 PM IST
ಬೆಂಗಳೂರು: ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದರಂತೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಬಳ ನಡೆಸಲು ಒಂದು ಕೋಟಿ ರೂ. ಸಹಾಯಧನ ನೀಡಲು ಆದೇಶ ಹೊರಡಿಸಿದೆ.
ಪ್ರತಿ ಕಂಬಳಕ್ಕೆ 5 ಲಕ್ಷ ರೂ.ಗಳನ್ನು ಸಹಾಯಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು 5 ಲಕ್ಷ ರೂ. ಗಳಂತೆ 50 ಲಕ್ಷ ರೂ ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು 5 ಲಕ್ಷ ರೂ ಗಳಂತೆ 50 ಲಕ್ಷ ರೂಗಳನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕಂಬಳಗಳಿಗೆ ಸಹಾಯಧನ ನೀಡಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.
ಪ್ರವಾಸೋದ್ಯಮ ಸಚಿವರಾದ ಸಿ.ಪಿ. ಯೋಗೇಶ್ವರ ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮನೆಬಾಗಿಲಿಗೆ ರೈಲ್ವೆ ಪಾರ್ಸೆಲ್ ತರಲಿದ್ದಾನೆ ಅಂಚೆಯಣ್ಣ
ಬೊಮ್ಮಾಯಿಗೆ ಚೌತಿ ಚಂದ್ರನಂತಾದ ಜನೋತ್ಸವ: 28ರ ಜನೋತ್ಸವ ಮತ್ತೆ ಮುಂದಕ್ಕೆ..
ಕೋಡಿ ಹೊಸಬೆಂಗ್ರೆಯಲ್ಲಿ ಕಡಲ್ಕೊರೆತ : ಮನೆ, ರಸ್ತೆ ಅಪಾಯದಲ್ಲಿ; ತಾತ್ಕಾಲಿಕ ಪರಿಹಾರ
ಎಪಿಕ್ ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ : ಪ್ರಕ್ರಿಯೆ ಚುರುಕುಗೊಳಿಸಲು ಡಿಸಿ ಸೂಚನೆ
ಹೆಚ್ಚುತ್ತಿರುವ ಅಪರಾಧ ಪ್ರಕರಣ : ಮತ್ತೆ ವಾಹನಗಳ ಟಿಂಟ್ ಮೇಲೆ ಪೊಲೀಸ್ ಕಣ್ಣು