ಟೊಯೋಟ-ಕಿರ್ಲೋಸ್ಕರ್‌ ಬಿಕ್ಕಟ್ಟು; ಮುಷ್ಕರ ನಿಷೇಧ, ಲಾಕ್‌ಔಟ್‌ ತೆರವಿಗೆ ಮುಂದಾದ ಸರ್ಕಾರ


Team Udayavani, Nov 17, 2020, 5:03 PM IST

ಟೊಯೋಟ-ಕಿರ್ಲೋಸ್ಕರ್‌ ಬಿಕ್ಕಟ್ಟು; ಮುಷ್ಕರ ನಿಷೇಧ, ಲಾಕ್‌ಔಟ್‌ ತೆರವಿಗೆ ಮುಂದಾದ ಸರ್ಕಾರ

ಬೆಂಗಳೂರು: ಕಾರ್ಮಿಕರು ಮತ್ತು ಆಡಳಿತ ಮಂಡಳಿ ನಡುವೆ ತೀವ್ರ ಕಗ್ಗಂಟಾಗಿದ್ದ ಬಿಡದಿ ಸಮೀಪದ ಟೊಯೋಟ-ಕಿರ್ಲೋಸ್ಕರ್‌ ಸಂಸ್ಥೆಯ ಬಿಕ್ಕಟ್ಟು ನಿವಾರಣೆಗೆ ಸರಕಾರ ಯತ್ನಿಸಿದ್ದು, ಇದೇ ವೇಳೆ ಕಂಪನಿಯಲ್ಲಿ ಮುಷ್ಕರ ನಿಷೇಧಿಸಿ, ಲಾಕ್‌ಔಟ್‌ ತೆರವುಗೊಳಿಸಲು ಸರಕಾರ ಮಂದಾಗಿದೆ.

ರಾಜ್ಯದ ಏಕೈಕ ಬೃಹತ್‌ ಆಟೋಮೊಬೈಲ್‌ ಕೈಗಾರಿಕೆಯಾಗಿರುವ ಟೊಯೋಟ-ಕಿರ್ಲೋಸ್ಕರ್‌ ಕಂಪನಿಯಲ್ಲಿ ಕೆಲ ದಿನಗಳ ಹಿಂದೆ ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವೆ ಉಂಟಾದ ತಿಕ್ಕಾಟದಿಂದ ಸುಮಾರು 39 ಕಾರ್ಮಿಕರನ್ನು ಅಮಾನತು ಮಾಡಲಾಗಿತ್ತು. ಇದರಿಂದ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದರೆ, ಕಂಪನಿಯೂ ಲಾಕ್‌ಔಟ್‌ ಘೋಷಣೆ ಮಾಡಿತ್ತು.

ಇದರಿಂದ ಕೂಡಲೇ ಮಧ್ಯಪ್ರವೇಶ ಮಾಡಿದ ರಾಮನಗರ ಜಿಲ್ಲಾ ಉಸ್ತುವಾರಿಯೂ ಆಗಿರುವ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕಾರ್ಮಿಕರು ಮತ್ತು ಆಡಳಿತ ಮಂಡಳಿ ಒಳಗೊಂಡಂತೆ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್‌, ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಮುಂತಾದವರೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಕಾರ್ಮಿಕ ವ್ಯಾಜ್ಯ ಕಾಯ್ದೆ ಸೆಕ್ಷನ್‌ 10(3)ರ ಪ್ರಕಾರ ಕಂಪನಿಯಲ್ಲಿ ಮುಷ್ಕರ ನಿಷೇಧಿಸಿ ಲಾಕ್‌ಔಟ್‌ ತೆರವುಗೊಳಿಸುವ ಮಹತ್ವದ ಆದೇಶವನ್ನು ಹೊರಡಿಸಲಾಗುವುದು ಎಂದು ಪ್ರಕಟಿಸಿದರು.

ನಾಳೆ ಬೆಳಗ್ಗೆಯಿಂದಲೇ ಕಂಪನಿಯ ಉತ್ಪಾದನಾ ಚಟುವಟಿಕೆ ಪುನಾರಂಭ ಆಗಬೇಕು. ಕೂಡಲೇ ಕೆಲಸಕ್ಕೆ ಹಾಜರಾಗಿ ಎಂದು ಕಾರ್ಮಿಕರಿಗೆ ಹಾಗೂ ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಆಡಳಿತ ಮಂಡಳಿಗೆ ಡಿಸಿಎಂ ಸೂಚಿಸಿದರು.

ಮುಷ್ಕರ, ಲಾಕ್‌ಔಟ್‌ ಎರಡೂ ಸರಿಯಲ್ಲ: ಮೊದಲಿನಿಂದಲೂ ರಾಜ್ಯದಲ್ಲಿ ಉತ್ತಮ ಶ್ರಮ ಸಂಸ್ಕೃತಿ ಇದೆ. ಇದರಿಂದ ಕೈಗಾರಿಗೆಗಳ ಬೆಳವಣಿಗೆ ಉತ್ತಮವಾಗಿ ಆಗಿದೆ ಎಂದು ಹೇಳಬಹುದು. ಇಡೀ ಏಷ್ಯಾದಲ್ಲಿಯೇ ಉತ್ತಮ ಹೂಡಿಕೆ ಹಾಗೂ ಕೈಗಾರಿಕೆಗಳಿಗೆ ಪೂರಕ ವಾತಾವರಣ ರಾಜ್ಯದಲ್ಲಿದೆ. ಕೋವಿಡ್‌ ನಂತರ ಕುಸಿತ ಕಂಡಿರುವ ಆರ್ಥಿಕತೆಯನ್ನು ಮತ್ತೆ ಮೇಲೆತ್ತುವ ಕೆಲಸ ಎಲ್ಲರೂ ಮಾಡಬೇಕಿದೆ. ಆದರೆ, ಮುಷ್ಕರ ಮತ್ತು ಲಾಕ್‌ಔಟ್‌ನಿಂದ ನಾವು ಎಂಥ ಸಂದೇಶ ನೀಡಲು ಸಾಧ್ಯ ಎಂದು ಡಿಸಿಎಂ ಸಭೆಯಲ್ಲಿ ಪಾಲ್ಗೊಂಡಿದ್ದ ಕಾರ್ಮಿಕ ಹಾಗೂ ಆಡಳಿತ ಮಂಡಳಿ ಪ್ರತಿನಿಧಿಗಳನ್ನು ಖಾರವಾಗಿ ಪ್ರಶ್ನಿಸಿದರು.

ಚೀನಾಕ್ಕೆ ಪರ್ಯಾಯವಾಗಿ ಇಡೀ ಜಗತ್ತು ಭಾರತದತ್ತ ನೋಡುತ್ತಿದೆ. ಆದರಲ್ಲೂ ಕರ್ನಾಟಕದಲ್ಲಿ ಇನ್ನಷ್ಟು ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಜಪಾನ್‌, ದಕ್ಷಿಣ ಕೊರಿಯಾ, ತೈವಾನ್‌ನಂಥ ದಕ್ಷಿಣ ಆಸಿಯಾ ದೇಶಗಳು ತುದಿಗಾಲ ಮೇಲೆ ನಿಂತಿವೆ. ಇಂಥ ಹೊತ್ತಿನಲ್ಲಿ ಮುಷ್ಕರ, ಲಾಕ್‌ಡೌನ್‌ನಂಥ ಮಾತುಗಳು ಬರಲೇಬಾರದು ಎಂದ ಅವರು, ಜಪಾನಿಯರಲ್ಲಿ ಇರುವ ವರ್ಕ್‌ ಕಲ್ಚರ್‌ ನಮ್ಮಲ್ಲೂ ಬರಬೇಕು.  ಇದು ಸ್ಪರ್ಧಾತ್ಮಕ ಜಗತ್ತು. ಮಾರಕಟ್ಟೆಯಲ್ಲಿ ನೂರೆಂಟು ಕಾರುಗಳಿವೆ. ಗ್ರಾಹಕನಿಗೆ ಆಯ್ಕೆ ಹೆಚ್ಚಾಗಿದೆ ಎಂಬುದನ್ನು ಮರೆಯಬಾರದು ಎಂದು ಕಾರ್ಮಿಕ ಪ್ರತಿನಿಧಿಗಳಿಗೆ ಸೂಕ್ಷ್ಮವಾಗಿ ತಿಳಿಹೇಳಿದರು.

ಸಭೆಯಲ್ಲಿ ಮಾಗಡಿ ಶಾಸಕ ಮಂಜುನಾಥ, ಡಿಸಿಎಂ ಕಾರ್ಯದರ್ಶಿ ಪಿ.ಪ್ರದೀಪ್, ರಾಮನಗರ ಜಿಲ್ಲಾಧಿಕಾರಿ ಅರ್ಚನಾ, ಎಸ್ಪಿ ಗಿರೀಶ್, ಹೆಚ್ಚುವರಿ ಕಾರ್ಮಿಕ ಆಯುಕ್ತ ಮಂಜುನಾಥ ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.