ಐಎಎಸ್ ಅಧಿಕಾರಿಗಳ ವರ್ಗ
Team Udayavani, Sep 14, 2019, 3:00 AM IST
ಬೆಂಗಳೂರು: ಕಂದಾಯ ಇಲಾಖೆಯ ಸರ್ವೇ ಮತ್ತು ಭೂ ದಾಖಲೆ ಇಲಾಖೆ ಆಯುಕ್ತರ ಹುದ್ದೆಗೆ ಇತ್ತೀಚೆಗಷ್ಟೇ ವರ್ಗಾವಣೆಗೊಂಡಿದ್ದ ಡಾ.ಎಂ.ಟಿ.ರೇಜು ಅವರನ್ನು ಮತ್ತೆ ಸರ್ವ ಶಿಕ್ಷಾ ಅಭಿಯಾನದ ರಾಜ್ಯ ಸಂಯೋಜಕ ನಿರ್ದೇಶಕ ಸ್ಥಾನಕ್ಕೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಮೆರಟೈಮ್ ಬೋರ್ಡ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉಜ್ವಲ್ ಕುಮಾರ್ ಘೋಷ್ ಅವರನ್ನು ಹೆಚ್ಚುವರಿಯಾಗಿ ಸರ್ವೇ ಮತ್ತು ಭೂ ದಾಖಲೆ ಇಲಾಖೆ ಆಯುಕ್ತರನ್ನಾಗಿ ನಿಯೋಜಿಸಲಾಗಿದೆ.
ವಿ.ಮಂಜುಳಾ ಅವರನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆ ಜತೆಗೆ ಹೆಚ್ಚುವರಿಯಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಆಡಳಿತ ಸುಧಾರಣೆ ತರಬೇತಿ ಮತ್ತು ರಾಜಕೀಯ ಪಿಂಚಣಿ) ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನಿಯೋಜಿಸಲಾಗಿದೆ. ಡಾ.ಎಸ್.ಸೆಲ್ವಕುಮಾರ್ ಅವರನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕಾರ್ಯದರ್ಶಿ ಹುದ್ದೆ ಜತೆಗೆ ಹೆಚ್ಚುವರಿಯಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿಯನ್ನಾಗಿ ನಿಯೋಜಿಸಿ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!