Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
Team Udayavani, Apr 25, 2024, 8:03 PM IST
ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ 388 ನ್ಯಾಯಾಧೀಶರನ್ನು ಮುಖ್ಯ ನ್ಯಾಯಮೂರ್ತಿಗಳ ನಿರ್ದೇಶನದಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ವರ್ಗಾವಣೆಗಳು ಮೇ 27ರಿಂದ ಜಾರಿಗೆ ಬರಲಿವೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್ ತಿಳಿಸಿದ್ದಾರೆ.
ವರ್ಗಾವಣೆ ಪಟ್ಟಿಯನ್ನು ಹೈಕೋರ್ಟ್ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. 6 ಮಂದಿ ಜಿಲ್ಲಾ ನ್ಯಾಯಾಧೀಶರು ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರನ್ನು ಬೇರೆ ಬೇರೆ ರಿಜಿಸ್ಟ್ರಾರ್ ಗಳ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗಿದೆ. ಅಂತೆಯೇ 62 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿದ್ದು, 16 ಹಿರಿಯ ಸಿವಿಲ್ ನ್ಯಾಯಾಧೀಶರಿಗೆ ಪದೋನ್ನತಿ ನೀಡಿ ವರ್ಗಾವಣೆ ಮಾಡಲಾಗಿದೆ.
166 ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ 138 ಸಿವಿಲ್ ನ್ಯಾಯಾಧೀಶರನ್ನು ಬೇರೆ ಬೇರೆ ಸ್ಥಳಗಳಿಗೆ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.