
ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ
Team Udayavani, May 31, 2023, 8:30 AM IST

ಬೆಂಗಳೂರು: ನೂತನ ಸರಕಾರವು ರಾಜ್ಯ ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಒಪ್ಪಿಗೆ ಸೂಚಿಸಿದೆ. ಇದರೊಂದಿಗೆ ಆಡಳಿತ ಪಕ್ಷದ ಶಾಸಕರು ಕ್ಷೇತ್ರಗಳಲ್ಲಿ ತಮಗೆ ಬೇಕಾದ ಅಧಿಕಾರಿ/ನೌಕರರನ್ನು ವರ್ಗಾವಣೆ ಮಾಡಿಸಿಕೊಳ್ಳಲು ಅವಕಾಶ ದೊರೆತಿದೆ.
2023-24ರ ಸಾಲಿಗೆ ಗ್ರೂಪ್ ಎ, ಬಿ, ಸಿ, ಡಿ ವರ್ಗದ ಅಧಿಕಾರಿ ಮತ್ತು ನೌಕರರಿಗೆ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ. 6 ಮೀರದಂತೆ ಜೂ. 1ರಿಂದ 15ರ ಒಳಗೆ ವರ್ಗಾವಣೆ ಪ್ರಕ್ರಿಯೆ ಮುಗಿಸುವಂತೆ ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆ ಆದೇಶ ಹೊರಡಿಸಿದೆ. ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖೆಯ ಸಚಿವರಿಗೆ ಅಧಿಕಾರ ನೀಡಲಾಗಿದೆ.
ಈ ಹಿಂದೆ ಬಿಜೆಪಿ ಸರಕಾರ ಅಧಿಕಾರ ಇದ್ದಾಗ ನೇಮಕಗೊಂಡಿದ್ದ ಅಧಿಕಾರಿಗಳು ಹಾಗೂ ನೌಕರರನ್ನು ವರ್ಗಾವಣೆ ಮಾಡಬೇಕು ಎಂಬುದು ಶಾಸಕರ ಒತ್ತಾಯ ಆಗಿತ್ತು. ತಮಗಿಷ್ಟ ಬಂದ ಅಧಿಕಾರಿಗಳು-ನೌಕರರನ್ನೇ ಸ್ಥಳೀಯವಾಗಿ ಶಾಸಕರು ವರ್ಗಾವಣೆ ಮಾಡಿಸಿಕೊಳ್ಳುವುದು ಹಲವು ವರ್ಷಗಳಿಂದ ನಡೆದುಬಂದಿದೆ. ಈಗ ಸರಕಾರ ಬದಲಾಗಿರುವುದರಿಂದ ಶಾಸಕರ ಒತ್ತಾಸೆ ಮೇರೆಗೆ ಸಿಎಂ ಈ ತೀರ್ಮಾನ ಕೈಗೊಂಡಿದ್ದು, ವರ್ಗಾವಣೆ ಅಧಿಕಾರವನ್ನು ಸಚಿವರಿಗೆ ನೀಡಿರುವುದರಿಂದ ವರ್ಗಾವಣೆಯ ಯಾವುದೇ ಕಡತ ಸಿಎಂ ಸಹಿಗೆ ಹೋಗಬೇಕಾಗಿಲ್ಲ.
ರಿಷ್ಯಂತ್ ದ.ಕ. ಪ್ರಭಾರ ಎಸ್‌ಪಿ
ಮಂಗಳೂರು: ದ.ಕ. ಜಿಲ್ಲಾ ಪ್ರಭಾರ ಎಸ್‌ಪಿ ಆಗಿ ರಿಷ್ಯಂತ್ ಸಿ.ಬಿ. ನಿಯೋಜನೆ ಗೊಂಡಿದ್ದಾರೆ. ಎಸ್‌ಪಿ ಆಗಿದ್ದ ಡಾ| ವಿಕ್ರಂ ಅಮಟೆ ಅನಾರೋಗ್ಯ ನಿಮಿತ್ತ ದೀರ್ಘ ರಜೆಯಲ್ಲಿರುವುದರಿಂದ ಪ್ರಭಾರ ಎಸ್‌ಪಿ ಆಗಿ ರಿಷ್ಯಂತ್ ಅವರನ್ನು ನಿಯೋಜಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ ಜಿಲ್ಲೆಗೆ ಯೆಲ್ಲೊ ಅಲರ್ಟ್; ಭಾರಿ ಮಳೆ ಸಾಧ್ಯತೆ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ
MUST WATCH
ಹೊಸ ಸೇರ್ಪಡೆ

World Cup; ಲೆಗ್ ಸ್ಪಿನ್ನರ್ ಚಾಹಲ್ ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Theft: ಶೂ ಬಾಕ್‌ನಲ್ಲಿದ್ದ ಮನೆ ಕೀ ಕದ್ದು ಆಭರಣ ದೋಚಿದ್ದ ಮಹಿಳೆ ಸೆರೆ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ