ಲಾರಿ, ಕಾರು ಭೀಕರ ಅಪಘಾತ; ಒಂದೇ ಕುಟುಂಬದ ಆರು ಮಂದಿ ಸಾವು
Team Udayavani, Jan 5, 2019, 12:49 PM IST
ಬೆಳಗಾವಿ: ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 5 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕೋಡಿಯ ನಿಪ್ಪಾಣಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶನಿವಾರ ಸಂಜೆ ನಡೆದಿದೆ.
ಮೃತರು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಮುರಗೋಡು ನಿವಾಸಿಗಳು ಎಂದು ಗುರುತಿಸಲಾಗಿದೆ. ವೇಗವಾಗಿ ಬಂದಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ದೂರ ಎಸೆಯಲ್ಪಟ್ಟಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕಾರಿನಲ್ಲಿದ್ದ 55 ವರ್ಷದ ರಹೀನಾ, ದಿಲಾವರ್, ಜಫ್ರೀನ್, 5 ವರ್ಷದ ಆಯಾನ್ ಸೇರಿದಂತೆ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ನಿಪ್ಪಾಣಿ ಶಹರ ಪೊಲೀಸರು ತಿಳಿಸಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.