ಸಚಿವ ಉಮೇಶ್ ಕತ್ತಿ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಬೊಮ್ಮಾಯಿ ಸೇರಿ ಗಣ್ಯರ ಸಂತಾಪ


Team Udayavani, Sep 7, 2022, 8:29 AM IST

ಸಚಿವ ಉಮೇಶ್ ಕತ್ತಿ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಬೊಮ್ಮಾಯಿ ಸೇರಿ ಗಣ್ಯರ ಸಂತಾಪ

ಬೆಂಗಳೂರು : ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್ ಡಿ. ದೇವೇಗೌಡ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವರಾಗಿದ್ದ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ಮನಸ್ಸಿಗೆ ಅತೀವ ದುಃಖವುಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓ ಶಾಂತಿ. ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ.

ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಜನಪ್ರಿಯ ಶಾಸಕರು, ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಶ್ರೀ ಉಮೇಶ್​ ಕತ್ತಿ ಅವರು ಹಠಾತ್ ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖ ಮತ್ತು ಆಘಾತವಾಗಿದೆ. ಸುದೀರ್ಘ ಕಾಲ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕ ನಮ್ಮನ್ನಗಲಿರುವುದು ರಾಜ್ಯಕ್ಕೆ ದೊಡ್ದ ನಷ್ಟ, ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವರಾದ ಶ್ರೀ ಉಮೇಶ್ ಕತ್ತಿ ಅವರ ನಿಧನದಿಂದ ನನಗೆ ತೀವ್ರ ಆಘಾತವಾಗಿದೆ. ಜನತಾ ಪರಿವಾರದ ಹಿರಿಯರಾಗಿದ್ದ ಶ್ರೀ ಕತ್ತಿ ಅವರು ಸ್ನೇಹಜೀವಿ ಆಗಿದ್ದರಲ್ಲದೆ, ತಮ್ಮ ನೇರ ನಡೆ ನುಡಿಯಿಂದ ನಮ್ಮೆಲ್ಲರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದರು. ಶ್ರೀ ಉಮೇಶ್ ಕತ್ತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸಚಿವ ಉಮೇಶ ಕತ್ತಿ ಅವರ ನಿಧನಕ್ಜೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸಂತಾಪ ಸೂಚಿಸಿದ್ದಾರೆ. ಉತ್ತರ ಕರ್ನಾಟಕ ದ ಹಿರಿಯ ನಾಯಕರಾಗಿದ್ದ ಕತ್ತಿಯವರ ಅಕಾಲಿಕ ಸಾವು ರಾಜಕೀಯ ವಲಯಕ್ಜೆ ತುಂಬಲಾಗದ ನಷ್ಟವಾಗಿದೆ ಎಂದು ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಪಕ್ಷದ ಹಿರಿಯ ನಾಯಕರು, ರಾಜ್ಯ ಸಚಿವರಾದ ಮಾನ್ಯ ಶ್ರೀ ಉಮೇಶ್ ಕತ್ತಿಯವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ದೇವರು ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ರಾಜ್ಯ ಸಚಿವ ಸಂಪುಟದ ಸದಸ್ಯ, ಆಹಾರ ಮತ್ತು ಅರಣ್ಯ ಖಾತೆ ಸಚಿವ ಶ್ರೀ ಉಮೇಶ್ ಕತ್ತಿಯವರ ನಿಧನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಿರಿಯ ಸಂಪುಟ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನ ತೀವ್ರ ದುಃಖ ತಂದಿದೆ. ರಾಜಕೀಯ ಹಾಗೂ ಜನಸೇವೆಯಲ್ಲಿ ಅಪಾರ ಅನುಭವ ಹೊಂದಿದ್ದ ನಾಯಕರನ್ನು ಕಳೆದುಕೊಂಡು ನಾಡು ಇಂದು ಬರಿದಾಗಿದೆ. ಭಗವಂತ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ. ಎಂದು ಅರೋಗ್ಯ ಸಚಿವ ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಹಿರಿಯ ರಾಜಕಾರಣಿ ಹಾಗೂ ಪ್ರಸ್ತುತ ಸರ್ಕಾರದಲ್ಲಿ ಅರಣ್ಯ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ಉಮೇಶ್ ಕತ್ತಿ ಅವರ ಅಗಲಿಕೆ ತುಂಬಲಾರದ ಹಾನಿ ಎಂದು‌ ಸ್ಪೀಕರ್ ವಿಶ್ವೇಶ್ವರ ಅನಂತ ಹೆಗಡೆ ಕಾಗೇರಿ ಕಂಬನಿ‌ ಮಿಡಿದಿದ್ದಾರೆ.

ಸಂಪುಟ ಸಹೋದ್ಯೋಗಿ, ಅರಣ್ಯ, ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನ ತೀವ್ರ ಆಘಾತ ತರಿಸಿದೆ ಎಂದು ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ನಮ್ಮ ಸಂಪುಟದ ಕ್ರಿಯಾಶೀಲ ಸಚಿವರಾಗಿದ್ದ ಅವರು ಇತ್ತೀಚಿಗೆ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆ ತರುವ ಮೂಲಕ ಜನಸ್ನೇಹಿಯಾಗಿದ್ದರು. ಆದರೆ, ಇಷ್ಟು ಬೇಗ ಇಂತಹ ದುರ್ಘಟನೆ ನಡೆಯುತ್ತದೆ ಎಂದು ಕನಸಿನಲ್ಲೂ ಉಹಿಸಿರಲಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕಂಬನಿ ಮಿಡಿದಿದ್ದಾರೆ.

ಕರ್ನಾಟಕ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರುಗಳಲ್ಲಿ ಒಬ್ಬರಾಗಿದ್ದ, ಅತ್ಯಂತ ಅನುಭವಿ ಹಾಗೂ ಉತ್ಸಾಹಿ ರಾಜಕಾರಣಿಯಾಗಿದ್ದ ಹಾಗೂ ಉತ್ತರ ಕರ್ನಾಟಕ ಭಾಗದ ಜನತೆಯ ದ್ವನಿಯಾಗಿದ್ದ ಉಮೇಶ್ ಕತ್ತಿಯವರ ನಿಧನದಿಂದ ರಾಜ್ಯಕ್ಕೆ ಅದರಲ್ಲಿಯೂ ವಿಶೇಷವಾಗಿ, ಉತ್ತರ ಕರ್ನಾಟಕ ಭಾಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಅಬಕಾರಿ ಸಚಿವ ಕೆ ಗೋಪಾಲಯ್ಯ ಕಂಬನಿ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

1-wewqeqwe

NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.