ರಾತ್ರಿ ಕರ್ಫ್ಯೂ, ರವಿವಾರದ ಲಾಕ್ಡೌನ್ ರದ್ದು
Team Udayavani, Jul 31, 2020, 6:28 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯದಲ್ಲಿ ಆ.1ರಿಂದ 31ರವರೆಗೆ ಮೂರನೇ ಹಂತದ ಅನ್ಲಾಕ್ 3.0 ಜಾರಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಶುಕ್ರವಾರಕ್ಕೆ ರಾತ್ರಿ ಕರ್ಫ್ಯೂ ಮುಕ್ತಾಯವಾಗಲಿದೆ.
ಆ. 2ರ ರವಿವಾರದ ಲಾಕ್ಡೌನ್ ಕೂಡ ರದ್ದಾಗಿದ್ದು, ಕಂಟೈನ್ಮೆಂಟ್ ವಲಯದಲ್ಲಿ ಲಾಕ್ಡೌನ್ ಆ. 31ರ ವರೆಗೆ ಮುಂದುವರಿಯಲಿದೆ.
ನಾಲ್ಕು ತಿಂಗಳ ಬಳಿಕ ರಾಜ್ಯದಲ್ಲಿ ಜಿಮ್ ಮತ್ತು ಯೋಗ ಕೇಂದ್ರಗಳು ಆ. 5ರಿಂದ ತೆರೆಯಲು ಅನುಮತಿ ನೀಡಲಾಗಿದ್ದು, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.
ಜತೆಗೆ ರಾಜ್ಯದೊಳಗೆ ಮತ್ತು ಅಂತಾರಾಜ್ಯ ಜನಸಂಚಾರ ಹಾಗೂ ಸರಕು ಸಾಗಣೆಗೆ ಯಾವುದೇ ನಿರ್ಬಂಧ ಇಲ್ಲ. ಸ್ವಾತಂತ್ರ್ಯೋತ್ಸವ ಆಚರಣೆಗೆ ಸಂಬಂಧಪಟ್ಟಂತೆ ಕೇಂದ್ರ ಗೃಹ ಇಲಾಖೆ ಹೊರಡಿಸಿರುವ ಮಾರ್ಗ ಸೂಚಿಗಳನ್ನು ಪಾಲಿಸುವಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಶುಕ್ರವಾರ ಹೊರಡಿಸಿರುವ ಆದೇಶದಲ್ಲಿ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್