ಈ ಸರ್ಕಾರದಲ್ಲಿ ಉಪಕುಲಪತಿ ಪದವಿಯನ್ನು ಮಾರಾಟಕ್ಕೆ ಇಡಲಾಗಿದೆ: ಡಿಕೆ ಶಿವಕುಮಾರ್
Team Udayavani, Nov 9, 2020, 3:38 PM IST
ಬೆಂಗಳೂರು: ಈ ಸರ್ಕಾರದಲ್ಲಿ ವಿಶ್ವವಿದ್ಯಾಲಯದ ಉಪಕುಲಪತಿ ಪದವಿಯನ್ನು ಮಾರಾಟಕ್ಕೆ ಇಡಲಾಗಿದೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ವಿವಿ ಪ್ರೊಫೆಸರ್ ಅಶೋಕ್ ಕುಮಾರ್ ಆತ್ಮಹತ್ಯೆಯಲ್ಲಿ ನಿಗೂಢತೆ ಇದೆ. ನಾಲ್ಕು ಜನ ಉಪಕುಲಪತಿಗಳ ನೇಮಕದಲ್ಲಿ ವ್ಯಾಪಾರ ವಹಿವಾಟು ನಡೆಸಲಾಗಿದೆ. ಉಪಕುಲಪತಿಯಾಗಿ ನೇಮಕ ಮಾಡಲು ಹಣ ಕೊಟ್ಟರೂ ನೇಮಕವಾಲಿಲ್ಲ, ತಾವು ಕೊಟ್ಟ ಹಣ ವಾಪಸ್ ಬರಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.
ಪ್ರಕರಣದಲ್ಲಿ ಯಾರ ಕೈವಾಡವಿದೆಯೋ ಗೊತ್ತಿಲ್ಲ. ಹಣವನ್ನು ಯಾವ ಮಂತ್ರಿ ತೆಗೆದುಕೊಂಡರೆಂದು ಗೊತ್ತಿಲ್ಲ. ಉಪಕುಲಪತಿಯಾಗಲು 2.5 ಕೋಟಿ ಹಣ ರೂ. ಕೊಟ್ಟಿದ್ದರು ಎಂದು ಚರ್ಚೆ ನಡೆಯುತ್ತಿದೆ. ಅವರಿಗೆ ಸ್ವಲ್ಪ ದಿನ ಕಾಯುವಂತೆ ಹಣ ಪಡೆದವರು ಹೇಳಿದ್ದರು ಎಂಬ ಮಾತುಗಳು ಕೇಳಿ ಬರುತ್ತಿದೆ. ದೊಡ್ಡ ದೊಡ್ಡ ವ್ಯಕ್ತಿಗಳ ಹೆಸರು ಕೈವಾಡ ಇರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು
ಪುನಃ ಬಗ್ಗೆ ತನಿಖೆ ನಡೆಸಲು ನ್ಯಾಯಾಂಗ ತನಿಖೆ ನಡೆಸಬೇಕು. ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು. ಈ ಬಗ್ಗೆ ಸಿಎಂ ತಕ್ಷಣ ತನಿಖೆಗೆ ಆದೇಶ ಮಾಡಬೇಕು ಎಂದು ಡಿಕೆಶಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!