“ಕೈ’ ನಾಯಕರ ಜತೆ ಇಂದು ವೇಣು ಸಭೆ
Team Udayavani, Jun 26, 2019, 3:04 AM IST
ಬೆಂಗಳೂರು: ಲೋಕಸಭೆ ಚುನಾವಣೆಯ ಸೋಲಿನ ಪರಾಮರ್ಶೆ ಹಾಗೂ ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲು ಬುಧವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಪಕ್ಷದ ನಾಯಕರ ಸಭೆ ನಡೆಸಲಿದ್ದಾರೆ.
ಬುಧವಾರ ಬೆಳಗ್ಗೆ 11ಗಂಟೆಗೆ ಪಕ್ಷದ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಹಾಗೂ ಹಾಲಿ ಸಂಸದರ ಜತೆ ಸಭೆ ನಡೆಸಲಿದ್ದು, ಆಯಾ ಕ್ಷೇತ್ರಗಳಲ್ಲಿ ಪಕ್ಷದ ಸೋಲಿಗೆ ಕಾರಣ ಹಾಗೂ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಲಿದ್ದಾರೆ.
ಮಧ್ಯಾಹ್ನ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದು. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಸಮನ್ವಯ ಸಮಿತಿ, ಪ್ರಚಾರ ಸಮಿತಿ, ಚುನಾವಣಾ ಸಮಿತಿ ಅಧ್ಯಕ್ಷರುಗಳು ಪಾಲ್ಗೊಳ್ಳಲಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹಾಕಿಕೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ