

Team Udayavani, Mar 17, 2020, 3:06 AM IST
ಬೆಂಗಳೂರು: ಕೊರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶಗಳನ್ನು ಜಿಲ್ಲಾಮಟ್ಟದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳ ಜತೆ ವಿಧಾನಸೌಧದಲ್ಲಿ ಸೋಮವಾರ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಕಾನ್ಫರೆನ್ಸ್ ಮೂಲಕ ಮಂಡ್ಯ, ಮೈಸೂರು, ವಿಜಯಪುರ, ಬಳ್ಳಾರಿ, ಕೊಪ್ಪಳ, ಕೊಡಗು ಜಿಲ್ಲೆಗಳಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ ಮಾಡಿ, ಅಲ್ಲಿನ ಹೋಮ್ ಸ್ಟೇಗಳ ಬಗ್ಗೆ ವಿಶೇಷ ನಿಗಾ ವಹಿಸಲು ಸೂಚಿಸಲಾಯಿತು. ಪ್ರತಿ ದಿನ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಭೆ ನಡೆಸಿ ಜಿಲ್ಲೆಯಲ್ಲಿನ ಪರಿಸ್ಥಿತಿ ಅವಲೋಕಿಸಬೇಕು. ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದ ಜಿಲ್ಲೆಗಳಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಕಾರ ಪಡೆಯಬೇಕು ಎಂದು ತಿಳಿಸಲಾಗಿದೆ.
ರಾಜ್ಯದ ಗಡಿ ಭಾಗಗಳಲ್ಲಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಸಹಾಯಕೇಂದ್ರ ಸ್ಥಾಪನೆ, ಚೆಕ್‌ಪೋಸ್ಟ್ ಪ್ರಯಾಣಿಕರ ಸ್ಕ್ರಿನಿಂಗ್ ಕ್ರಮ ವಹಿಸಬೇಕು. ದೊಡ್ಡ ಪ್ರಮಾಣದಲ್ಲಿ ದೇವಸ್ಥಾನಗಳಿಗೆ ಜನರು ಭೇಟಿ ನೀಡುವ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಸರ್ಕಾರ ಹೊರಡಿಸಿರುವ ಮಾರ್ಗಸೂಚಿ, ಆದೇಶಗಳನ್ನು ನಿಗದಿತ ಅವಧಿಯವರೆಗೆ ಕಟ್ಟುನಿಟ್ಟಾಗಿ ಜಾರಿಯಾಗಿರುವ ಬಗ್ಗೆ ಸೂಕ್ತ ಮೇಲ್ವಿಚಾರಣೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಹೇಳಲಾಗಿದೆ.
ಈ ವೇಳೆ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್, ಆರೋಗ್ಯ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Ad
Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
Gadag: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ… ಬಾಲಕಿ ಸಾ*ವು, ಯುವಕನ ಸ್ಥಿತಿ ಗಂಭೀರ
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಆರಂಭವಾಗಿದ್ದು, ಬದಲಾವಣೆ ಸನಿಹವಿದೆ: ಬಿ.ಶ್ರೀರಾಮುಲು
ಕಾಂಗ್ರೆಸ್ ಸೇರಲು BSY ಮುಂದಾಗಿದ್ರ… ಲಿಂಬಾವಳಿ ಹೇಳಿಕೆಗೆ ದೊಡ್ಡನಗೌಡ ಪಾಟೀಲ ಹೇಳಿದ್ದೇನು?
Belagavi: ಒಂದೇ ಕುಟುಂಬದ ಮೂವರು ಆತ್ಮಹ*ತ್ಯೆ: ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕ
Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಮಡೆನೂರು ಮನು
Actress: ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್ ಶಾಕ್
Optimistic: ಆಶಾವಾದಿಗಳಾಗೋಣ
Path of Life: ಬದುಕಿನ ದಾರಿಯಲ್ಲಿ ಬೆಳಕಿದೆ; ಧೈರ್ಯವಾಗಿ ಹೆಜ್ಜೆ ಹಾಕಿ
You seem to have an Ad Blocker on.
To continue reading, please turn it off or whitelist Udayavani.