ವೀಡಿಯೋ ವೈರಲ್: ಎಲ್ಲ ಆರೋಪಿಗಳಿಗೆ ಜಾಮೀನು
Team Udayavani, Jul 7, 2019, 3:00 AM IST
ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಎಲ್ಲ 11 ಮಂದಿ ಆರೋಪಿಗಳಿಗೆ ಪುತ್ತೂರು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಅವರ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಸಹಾಯಕ ಸರಕಾರಿ ಅಭಿಯೋಜಕರ ಆಕ್ಷೇಪಣೆ ವಾದ ಹಾಗೂ ಆರೋಪಿ ಪರ ನ್ಯಾಯವಾದಿಗಳ ವಾದ ಮಂಡನೆ ಶನಿವಾರ ನ್ಯಾಯಾಲಯದಲ್ಲಿ ನಡೆಯಿತು. ಸಹಾಯಕ ಸರಕಾರಿ ಅಭಿಯೋಜಕರ ಆಕ್ಷೇಪಣೆ ದಾಖಲಾಗದ ಕಾರಣ ಜಾಮೀನು ಅರ್ಜಿಯ ವಿಚಾರಣೆ ಶನಿವಾರಕ್ಕೆ ಮುಂದೂಡಲ್ಪಟ್ಟಿತ್ತು.