ಬಿಎಸ್ವೈ ಪುತ್ರ ವಿಜಯೇಂದ್ರ ಪರಿಷತ್ ಪ್ರವೇಶ ಪಕ್ಕಾ; ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ತೀರ್ಮಾನ
Team Udayavani, May 14, 2022, 3:45 PM IST
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಮತ್ತು ರಾಜ್ಯಸಭೆ ಚುನಾವಣೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ವಿಧಾನ ಪರಿಷತ್ ಟಿಕೆಟ್ ನೀಡಲು ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ.
ಮಲ್ಲೇಶ್ವರಂನ ಬಿಜೆಪಿ ಮುಖ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ನಾಲ್ಕು ಸ್ಥಾನಗಳ ಪೈಕಿ ಒಂದಕ್ಕೆ ವಿಜಯೇಂದ್ರ ಹೆಸರು ಅಂತಿಮವಾಗಿದೆ. ಉಳಿದ ಮೂರು ಸ್ಥಾನಗಳಿಗೆ 15 ಹೆಸರು ಶಿಫಾರಸು ಮಾಡಲು ತೀರ್ಮಾನ ಮಾಡಲಾಗಿದೆ. ಲಕ್ಷ್ಮಣ ಸವದಿ, ನಿರ್ಮಲ್ ಕುಮಾರ್ ಸುರಾನ, ಸಿದ್ದರಾಜು, ರಾಜೇಂದ್ರ, ಮಹೇಶ್ ತೆಂಗಿನಕಾಯಿ ಹೆಸರನ್ನು ಪರಿಷತ್ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ.
ರಾಜ್ಯಸಭೆಯ ಎರಡು ಸ್ಥಾನದಲ್ಲಿ ಒಂದು ಸ್ಥಾನಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಅಂತಿಮಗೊಳಿಸಲಾಗಿದೆ. ಉಳಿದ ಒಂದು ಸ್ಥಾನಕ್ಕೆ ಕೆ.ಸಿ.ರಾಮಮೂರ್ತಿ ಸೇರಿ ಐವರ ಹೆಸರು ಶಿಫಾರಸು ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದನ್ನೂ ಓದಿ:ಸಚಿವ ಸಂಪುಟ ಪುನಾರಚನೆ ಕುರಿತು ಸಿಎಂ ನಿರ್ಧಾರ: ಅರುಣ್ ಸಿಂಗ್
ವಿಧಾನ ಪರಿಷತ್ ಸದಸ್ಯರಾದ ನಂತರ ವಿಜಯೇಂದ್ರಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ. ಅಲ್ಲದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದಾವೊಸ್ ಪ್ರಯಾಣ ನಂತರ ಸಂಪುಟ ಪುನಾರಚನೆ ನಡೆಸಲಾಗುವುದು ಎನ್ನಲಾಗಿದೆ. ಸಿಎಂ ಬೊಮ್ಮಾಯಿ ಮೇ.21ರ ರಾತ್ರಿ ದಾವೋಸ್ ಗೆ ತೆರಳಲಿದ್ದು, ಮೇ.26ರಂದು ಬೆಂಗಳೂರಿಗೆ ಮರಳಲಿದ್ದಾರೆ.
ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಂತಾದವರು ಭಾಗವಹಿಸಿದ್ದರು.
ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು.
ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ @nalinkateel, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai, ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSYBJP, ಶ್ರೀ @JagadishShettar, ಕೇಂದ್ರ ಸಚಿವ ಶ್ರೀ @JoshiPralhad, (1/3) pic.twitter.com/2cSIOVx9ET
— BJP Karnataka (@BJP4Karnataka) May 14, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ