
ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನ ಪ್ರಕರಣ: ಸ್ಪಷ್ಟನೆ ನೀಡಿದ ವಿಜಯೇಂದ್ರ
Team Udayavani, Jul 2, 2021, 12:44 PM IST

ಬೆಂಗಳೂರು: ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ, ಸಚಿವ ಶ್ರೀರಾಮುಲು ಹೆಸರು ಹೇಳಿಕೊಂಡು ಹಲವಾರು ಮಂದಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಎಂಬವರನ್ನು ಗುರುವಾರ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿ ವೈ ವಿಜಯೇಂದ್ರ, ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ ಎಂದಿದ್ದಾರೆ.
ಇದನ್ನೂ ಓದಿ:ಫೋನ್ ಕದ್ದಾಲಿಕೆ: ಪೊಲೀಸರಿಗೆ ಅರ್ಚಕರ ನಂಬರ್ ನೀಡಿದ್ದ ಅರವಿಂದ್ ಬೆಲ್ಲದ್?
ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕು ಎಂದು ವಿಜಯೇಂದ್ರ ಮನವಿ ಮಾಡಿದ್ದಾರೆ.
ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ. (1/2) pic.twitter.com/3gY031Wr7W
— Vijayendra Yeddyurappa (@BYVijayendra) July 2, 2021
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಮಂಗಳೂರು: ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ತೆರವುಗೊಳಿಸಲು ಸೂಚನೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

ಐಸಿಸಿ ಏಕದಿನ ರ‍್ಯಾಂಕಿಂಗ್ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ