
ಮಸ್ಕಿಯಲ್ಲಿ ಬಿಜೆಪಿ ‘ಪ್ರತಾಪ’ವಿಲ್ಲ : ಸೋಲಿನ ಬಗ್ಗೆ ಟ್ವೀಟ್ ಮಾಡಿದ ವಿಜಯೇಂದ್ರ
Team Udayavani, May 2, 2021, 12:00 PM IST

ಬೆಂಗಳೂರು : ಮಸ್ಕಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಸೋಲಿನ ಹತಾಶೆಯಿಂದ ಹೊರ ನಡೆದಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ. ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ.
ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ.ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ.ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ.?
— Vijayendra Yeddyurappa (@BYVijayendra) May 2, 2021
ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ. ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇನ್ನು ಪ್ರತಿ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಸೋಲಿನ ಭೀತಿ ಶುರುವಾಗಿತ್ತು. ಈ ಕಾರಣದಿಂದ ಬಿಜೆಪಿ ಬೆಂಬಲಿತ ಭಾಗದಲ್ಲೇ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರಿಂದ ಪ್ರತಾಪ ಗೌಡ ಸೋಲೊಪ್ಪಿಕೊಂಡು ಹೊರ ನಡೆದಿದ್ದಾರೆ.
ಟಾಪ್ ನ್ಯೂಸ್
