ಯೋಗೀಶ್ ಗೌಡ ಹತ್ಯೆ ಪ್ರಕರಣ : ಮತ್ತೆ ವಿನಯ್ ಜಾಮೀನು ಅರ್ಜಿ ಸಲ್ಲಿಕೆ
Team Udayavani, Nov 26, 2020, 7:53 PM IST
ಧಾರವಾಡ : ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ ಗೌಡ ಹತ್ಯೆ ಪ್ರಕರಣದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಪರ ವಕೀಲರು ಗುರುವಾರ ಮತ್ತೆ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಧಾರವಾಡದ ಮೂರನೇ ಹೆಚ್ಚುವರಿ ಜಿಲ್ಲಾ ಹಾಗೂ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಆಗಮಿಸಿದ ವಕೀಲರು ಜಾಮೀನು ಅರ್ಜಿ ಸಲ್ಲಿಸಿದರು.
ಈ ಹಿಂದೆ ನವೆಂಬರ್ 9 ಕ್ಕೆ ಜಾಮೀನು ಅರ್ಜಿಯನ್ನು ಭರತ್ ಕುಮಾರ್ ಎಂ ಅವರು ಸಲ್ಲಿಸಿದ್ದರು. ಆದರೆ ಆ ಬಳಿಕ ಅದನ್ನು ಅವರು ಕುಟುಂಬ ಸದಸ್ಯರ ಕೋರಿಕೆ ಮೇರೆಗೆ ಮರಳಿ ಪಡೆದಿದ್ದರು.
ಇದೀಗ ಮತ್ತೆ ವಿನಯ ಕುಲಕರ್ಣಿ ಪರ ವಕೀಲರಾಗಿರುವ ಬಾಹುಬಲಿ ದನವಾಡಿ ಅವರು ಇಂದು ಹೊಸ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಯಾವಾಗ ವಿಚಾರಣೆಗೆ ಬರುತ್ತದೆ. ಅದಕ್ಕೆ ಸಿಬಿಐ ಅಧಿಕಾರಿಗಳು ಯಾವ ರೀತಿಯ ತಕರಾರು ಅರ್ಜಿ ಸಲ್ಲಿಸುತ್ತಾರೆ ಎಂಬುದರ ಮೇಲೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯ ಭವಿಷ್ಯ ನಿರ್ಧಾರ ವಾಗಲಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮರಾಠ ಸಮಾಜದವರು ಕರ್ನಾಟಕದಲ್ಲಿ ಖುಷಿಯಿಂದಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್
ಹಳ್ಳಿಹಕ್ಕಿ ‘ಸಚಿವ’ ಆಸೆಗೆ ತಣ್ಣೀರೆರಚಿದ ಕೋರ್ಟ್: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ
ಬೆಳಗಾವಿಯಲ್ಲಿ ಅಧಿವೇಶನ ನಡೆಸದ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ:ಭಿತ್ತಿಪತ್ರ ಪ್ರದರ್ಶನ
ಮಹಾರಾಷ್ಟ್ರ ಸಿಎಂ ‘ಬೆಳಗಾವಿ’ ಹೇಳಿಕೆ: ರಾಜ್ಯದ ನಾಯಕರ ಖಂಡನೆ, ಸಚಿವೆ ಜೊಲ್ಲೆ ಎಚ್ಚರಿಕೆ
ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು: ಡಿಸಿಎಂ ಲಕ್ಷ್ಮಣ ಸವದಿ