ನೀತಿ ಸಂಹಿತೆ ಉಲ್ಲಂಘನೆ: ಪರಂ ವಿರುದ್ಧದ ಪ್ರಕರಣಕ್ಕೆ ತಡೆ

Team Udayavani, May 31, 2019, 3:00 AM IST

ಬೆಂಗಳೂರು: ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಡಾ. ಜಿ. ಪರಮೇಶ್ವರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅಲೋಕ್‌ ಆರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ, ಜಮಖಂಡಿ ತಾಲೂಕು ಸಾವಳಗಿ ಪೊಲೀಸ್‌ ಠಾಣಾಧಿಕಾರಿ ಹಾಗೂ ಚುನಾವಣೆ ವೇಳೆ ಫ್ಲೈಯಿಂಗ್‌ ಸ್ಕ್ವಾಡ್‌ ಆಗಿ ಕರ್ತವ್ಯ ನಿರ್ವಹಿಸಿದ್ದ ದೂರುದಾರ ಶ್ರೀನಿವಾಸ್‌ ಚಿಕ್ಕೂರು ಅವರಿಗೆ ನೋಟಿಸ್‌ ಜಾರಿಗೆ ಆದೇಶಿಸಿ, ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿತು.

ಜಮಖಂಡಿ ಕ್ಷೇತ್ರದ ಉಪ ಚುನಾವಣೆಯ ಬಹಿರಂಗ ಪ್ರಚಾರದ ವೇಳೆ ಸಾವಳಗಿ ಗ್ರಾಮದಲ್ಲಿ ಮಾತನಾಡುತ್ತ ಡಾ. ಪರಮೇಶ್ವರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಆನಂದ್‌ ನ್ಯಾಮಗೌಡ ಅವರಿಗೆ ಮತ ಹಾಕಿದರೆ 3 ತಿಂಗಳಲ್ಲಿ ಜಂಬಗಿ-ಸಾವಳಗಿ ರಸ್ತೆ ದುರಸ್ತಿ ಮಾಡಲಾಗುವುದು ಎಂದು ಹೇಳಿದ್ದರು.

ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ಜಮಖಂಡಿ ವಿಧಾನಸಭಾ ಕ್ಷೇತ್ರದ ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿ ಶ್ರೀನಿವಾಸ್‌ ಚಿಕ್ಕೂರು ಅವರು 2018 ಅ.10ರಂದು ದೂರು ನೀಡಿದ್ದರು. ಇದನ್ನು ಆಧರಿಸಿ ಸಾವಳಗಿ ಪೊಲೀಸರು ಅ.24ರಂದು ಎಫ್ಐಆರ್‌ ದಾಖಲಿಸಿಕೊಂಡಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ