ಸಿಎಂ ನೀತಿ ಸಂಹಿತೆ ಉಲ್ಲಂಘನೆ; ಜೆಡಿಎಸ್ ದೂರು
Team Udayavani, Nov 26, 2019, 3:04 AM IST
ಬೆಂಗಳೂರು: “ವೀರಶೈವ ಮತ್ತು ಲಿಂಗಾಯತ ಅಭ್ಯರ್ಥಿಗಳಿಗೇ ವೋಟು ಹಾಕಬೇಕು’ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾದರಿ ಚುನಾವಣಾ ನೀತಿಸಂಹಿತೆ ಉಲ್ಲಂ ಸಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಸೋಮವಾರ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದೆ.
ಗೋಕಾದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಚುನಾವಣಾ ಪ್ರಚಾರದ ಭಾಷಣದಲ್ಲಿ ಮುಖ್ಯಮಂತ್ರಿ ನೀಡಿದ ಹೇಳಿಕೆಯು ಒಂದು ಸಮುದಾಯವನ್ನು ಓಲೈಸುವಂತಿದೆ. ಇದು ಮಾದರಿ ಚುನಾವಣಾ ನೀತಿಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಪರ ವಕೀಲ ಎಸ್.ಪಿ. ಪ್ರದೀಪ್ ಕುಮಾರ್, ಮುಖ್ಯ ಚುನಾವಣಾಧಿಕಾರಿಗೆ ನೀಡಿದ ದೂರಿನಲ್ಲಿ ಹೇಳಿದ್ದಾರೆ.
“ವೀರಶೈವ ಮತ್ತು ಲಿಂಗಾಯತ ಸಮುದಾಯದವರು ಬೇರೆ ಪಕ್ಷಗಳಿಗೆ ಒಂದು ಮತವನ್ನೂ ಚಲಾವಣೆ ಮಾಡಬಾರದು. ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕಾದರೆ ಎಲ್ಲ ವೀರಶೈವ ಮತ್ತು ಲಿಂಗಾಯತರು ನಮ್ಮ ಅಭ್ಯರ್ಥಿಗಳಿಗೇ ವೋಟು ಹಾಕಬೇಕು’ ಎಂದು ಬೆಳಗಾವಿ ಜಿಲ್ಲೆಯ ಅಥಣಿ, ಕಾಗವಾಡ, ಶಿರಗುಪ್ಪೆ, ಗೋಕಾಕ ಚುನಾವಣಾ ಪ್ರಚಾರದಲ್ಲಿ ಯಡಿಯೂರಪ್ಪ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ