ವಿಶಾಖಪಟ್ಟಣ ವಿಷಾನಿಲ ಸೋರಿಕೆ ಪ್ರಕರಣ: ಸಿಎಂ ಯಡಿಯೂರಪ್ಪ ಸಂತಾಪ
Team Udayavani, May 7, 2020, 11:54 AM IST
ಬೆಂಗಳೂರು: ಆಂಧ್ರ ಪ್ರದೇಶದ ವಿಶಾಖಪಟ್ಟಣದ ಕಾರ್ಖಾನೆಯಲ್ಲಿ ಇಂದು ವಿಷಾನಿಲ ಸೋರಿಕೆ ದುರಂತ ನಡೆದಿದ್ದು, ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಎಸ್ ವೈ, ವಿಶಾಖಪಟ್ಟಣ ಘಟನೆಯಿಂದ ಆಘಾತವಾಗಿದೆ. ಘಟನೆಯಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.
ಇಂದು ಮುಂಜಾನೆ ವಿಶಾಖಪಟ್ಟಣದ ನಾಯ್ಡು ತೋಟಾ ಸಮೀಪದ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಸ್ ನಲ್ಲಿ ವಿಷಾನಿಲ ಸೋರಿಕೆಯಾಗಿದೆ. ಈ ಗಾಳಿಯನ್ನು ಸೇವಿಸಿದವರು ಅಸ್ವಸ್ಥರಾಗಿದ್ದಾರೆ. ಓರ್ವ ಬಾಲಕಿ, ಇಬ್ಬರು ವೃದ್ಧರು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದು, ಸಾವಿರಾರು ಜನರು ಅಸ್ವಸ್ಥರಾಗಿದ್ದಾರೆ.
ವಿಶಾಖಪಟ್ಟಣ ದುರಂತಕ್ಕೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ ಸೂಚಿಸಿದ್ದು, ದುರಂತದ ಕುರಿತು ತನಿಖೆ ನಡೆಸಲು ಆದೇಶಿಸಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಬೇಕಾದ ಎಲ್ಲಾ ನೆರವು ಕೇಂದ್ರ ಸರ್ಕಾರದಿಂದ ದೊರೆಯಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ