12ಕ್ಕೆ ವಿವೇಕಾನಂದ ಜನ್ಮ ದಿನಾಚರಣೆ
Team Udayavani, Jan 10, 2018, 9:32 AM IST
ಬೆಂಗಳೂರು: ರಾಜ್ಯದ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ಕಾಲೇಜುಗಳಲ್ಲೂ ಜ.12ರಂದು ಸ್ವಾಮಿ ವಿವೇಕಾನಂದರ 155ನೇ ಜನ್ಮ ದಿನ ಆಚರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ವಿವೇಕಾನಂದ ಜನ್ಮದಿನಾಚರಣೆ ಪ್ರಯುಕ್ತ ಅವರ ಚಿಂತನೆ ಕುರಿತಾದ ವಿಚಾರ ಗೋಷ್ಠಿ, ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಭಾಷಣ ಹಾಗೂ ಇನ್ನಿತರ ಕಾರ್ಯಕ್ರಮ ಆಯೋಜಿಸಲು ಸೂಚಿಸಿದೆ. ಜಿಲ್ಲಾ ಕೇಂದ್ರದಲ್ಲಿ ಉಸ್ತುವಾರಿ ಸಚಿವರು, ಆ ಜಿಲ್ಲೆಗೆ ಸಂಬಂಧಿಸಿದ ಸಚಿವರು, ಸಂಸದರು, ಎಲ್ಲಾ ಶಾಸಕರು, ಜಿಲ್ಲಾಧಿಕಾರಿಗಳು, ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ನಿರ್ದೇಶಿಸಿದೆ.
ಅರಮನೆ ಮೈದಾನದಲ್ಲಿ ಸಮಾವೇಶ: ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರಮನೆ ಮೈದಾನದಲ್ಲಿ ಯುವ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ನಗರದ ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳನ್ನು ಕಳುಹಿಸಿಕೊಡುವಂತೆ ಕಾಲೇಜು ಶಿಕ್ಷಣ ಇಲಾಖೆಯಿಂದ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ