ಗೆಲುವನ್ನು ಮತದಾರರು ತೀರ್ಮಾನಿಸುತ್ತಾರೆ: ಮಹೇಶ್‌

Team Udayavani, Sep 7, 2019, 3:00 AM IST

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆಲ್ಲಬೇಕು ಎಂಬುದನ್ನು ಅಲ್ಲಿನ ಮತದಾರರು ತೀರ್ಮಾನ ಮಾಡುತ್ತಾರೆಯೇ ಹೊರತು ಬೇರೆಯವರಲ್ಲ ಎಂದು ಶಾಸಕ ಸಾ.ರಾ.ಮಹೇಶ್‌ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಸೋಲುತ್ತಾರೆ ಎಂಬ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ತಿರುಗೇಟು ನೀಡಿದ ಅವರು, ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್‌ ಕಾರ್ಯಕರ್ತರು ಇನ್ನೂ ಗಟ್ಟಿಯಾಗಿದ್ದಾರೆ.

ಯಾರು ಗೆಲ್ಲಬೇಕು ಎಂಬುದನ್ನು ಅಲ್ಲಿನ ಮತದಾರರು ತೀರ್ಮಾನ ಮಾಡುತ್ತಾರೆ ಎಂದರು. ಸಾರ್ವತ್ರಿಕ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಿಂದ ಜಿ.ಟಿ.ದೇವೇಗೌಡರು ತಮ್ಮ ಮಗನಿಗೆ ಟಿಕೆಟ್‌ ಕೇಳಿದ್ದರು. ವರಿಷ್ಠರು ಕೂಡ ಜಿ.ಟಿ. ಪುತ್ರನಿಗೆ ಟಿಕೆಟ್‌ ನೀಡಲು ಒಪ್ಪಿಕೊಂಡಿದ್ದರು. ಆದರೆ, ಚುನಾವಣೆಗೆ ಒಂದು ತಿಂಗಳಿದ್ದಾಗ ಹಿರಿಯರೊಬ್ಬರನ್ನು ನಮ್ಮ ಪಕ್ಷಕ್ಕೆ ಕರೆ ತಂದು ಟಿಕೆಟ್‌ ನೀಡಿದೆವು. ಅವರು ಕೊನೆಗೆ ಪಕ್ಷ ಬಿಟ್ಟು ಹೋಗಿದ್ದಾರೆ. ಸದ್ಯ ಏನಾಗಿದೆ ಅಂತ ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ