ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸಭಾತ್ಯಾಗ

Team Udayavani, Feb 14, 2017, 7:18 AM IST

14-sss-8.jpg

ವಿಧಾನಸಭೆ: ಐಟಿ ದಾಳಿಗೊಳಗಾದ ಸಚಿವ ರಮೇಶ್‌ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ
ಪ್ರಕರಣ ಇತ್ಯರ್ಥವಾಗುವವರೆಗೆ ಮುಖ್ಯಮಂತ್ರಿಗಳೇ ಅವರನ್ನು  ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು
ಸಭಾತ್ಯಾಗ ಮಾಡಿದರು.

ಸಚಿವ ರಮೇಶ್‌ ಜಾರಕಿಹೊಳಿ ಅವರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಕುರಿತು ಪ್ರತಿಪಕ್ಷ ನಾಯಕ ಜಗದೀಶ್‌
ಶೆಟ್ಟರ್‌ ಮತ್ತಿತರರು ಮಂಡಿಸಿದ ನಿಲುವಳಿ ಸೂಚನೆ ಪ್ರಸ್ತಾಪವನ್ನು ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ನಿಯಮ 69ಕ್ಕೆ ಪರಿವರ್ತಿಸಿ
ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದರು. ಅದರಂತೆ ಜಗದೀಶ್‌ ಶೆಟ್ಟರ್‌ ಚರ್ಚೆ ಆರಂಭಿಸುತ್ತಿದ್ದಂತೆ ಮಧ್ಯಪ್ರವೇಶಿಸಿದ ಕಾನೂನು
ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ದಾಖಲೆಗಳಿದ್ದರೆ ಅದನ್ನು ಆಧರಿಸಿ ಮಾತನಾಡಿದರೆ ಸರ್ಕಾರ
ಬೆಳಕು ಚೆಲ್ಲಲು ಸಾಧ್ಯ. ಐಟಿ ಅಧಿಕಾರಿಗಳು ದಾಖಲೆ ಬಿಡುಗಡೆ ಮಾಡಿದರೆ ಅದರ ಮೇಲೆ ಚರ್ಚೆ ಮಾಡೋಣ. ಸರ್ಕಾರ ಉತ್ತರ
ನೀಡುತ್ತದೆ. ಅದು ಬಿಟ್ಟು ರಾಜಕೀಯ ಕಾರಣಗಳಿಗಾಗಿ ವಿಷಯ ಪ್ರಸ್ತಾಪಿಸಿ ಸದನದ ಸಮಯ ವ್ಯರ್ಥ ಮಾಡುವುದು ಸರಿಯಲ್ಲ
ಎಂದರು. ಸಚಿವರಾದ ಕಾಗೋಡು ತಿಮ್ಮಪ್ಪ ಮತ್ತು ರಮೇಶ್‌ ಕುಮಾರ್‌ ಕೂಡ ಇದಕ್ಕೆ ದನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಗದೀಶ್‌ ಶೆಟ್ಟರ್‌, ಐಟಿ ದಾಳಿ ವೇಳೆ ಸಿಕ್ಕಿದೆ ಎನ್ನಲಾದ ಆಸ್ತಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಸಚಿವರೇ ಒಪ್ಪಿಕೊಂಡ ಕೆಲವು ಅಂಶಗಳ ಆಧಾರದ ಮೇಲೆ ಚರ್ಚಿಸುತ್ತೇನೆ. ಐಟಿ ದಾಳಿ ವೇಳೆ 115 ಕೋಟಿ ರೂ. ಆಸ್ತಿ ಪತ್ತೆಯಾಗಿದ್ದಾಗಿ  ಸಚಿವರೇ ಒಪ್ಪಿಕೊಂಡಿದ್ದಾರೆ. ಈ ಆಸ್ತಿ ಕುರಿತು ಅವರು ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಥವಾ ಲೋಕಾಯುಕ್ತರ
ಮುಂದೆ ಪ್ರತಿ ವರ್ಷ ಘೋಷಿಸುವ ಆಸ್ತಿಯಲ್ಲಿ ನಮೂದಿಸಿದ್ದರೇ ಎಂಬುದನ್ನು ಸ್ಪಷ್ಟಪಡಿಸಲಿ ಎಂದರು.

ನೈತಿಕತೆ ಎಲ್ಲಿ ಉಳಿದಿದೆ?: ಮಧ್ಯಪ್ರವೇಶಿಸಿದ ಸಚಿವ ಕೆ.ಆರ್‌. ರಮೇಶ್‌ಕುಮಾರ್‌, ರಾಜಕಾರಣದಲ್ಲಿ ಈಗ ನೈತಿಕತೆ ಎಲ್ಲಿ ಉಳಿದಿದೆ. ಹಿಂದೆ ನೆಹರೂ ಪ್ರಧಾನಿಯಾಗಿದ್ದಾಗ ಪ್ರತಿಪಕ್ಷದಲ್ಲಿದ್ದ ಆಚಾರ್ಯ ಕೃಪಲಾನಿ ಕಳಪೆ ರಕ್ಷಣಾ ಸಾಮಗ್ರಿ ಖರೀದಿಸಿದ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ ನೆಹರು ಯಾವುದೇ ದಾಖಲೆಗಳನ್ನು ಕೇಳದೆ ಖರೀದಿಯನ್ನೇ ರದ್ದುಪಡಿಸಿದ್ದರು. ರೈಲು ಅಪಘಾತವಾದಾಗ ರೈಲ್ವೆ ಸಚಿವರಾಗಿದ್ದ ಲಾಲ್‌ಬಹದ್ದೂರ್‌ ಶಾಸಿŒ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಅಷ್ಟೇ ಏಕೆ, ರಾಜ್ಯದಲ್ಲಿ ರಾಮರಾಯರು ಗೃಹ ಸಚಿವರಾಗಿದ್ದಾಗ ಮಧುಗಿರಿಯಲ್ಲಿ ಅತ್ಯಾಚಾರ ಪ್ರಕರಣ ನಡೆದಿತ್ತು. ಈ ಪ್ರಕರಣ ಪ್ರಸ್ತಾಪಿಸಿದ್ದ ಪ್ರತಿಪಕ್ಷಗಳು, ನಿಮ್ಮ ಮಗಳಿಗೇ ಈ ಪರಿಸ್ಥಿತಿ ಬಂದಿದ್ದರೆ ಎಂದು ಗೃಹ ಸಚಿವರನ್ನು ಪ್ರಶ್ನಿಸಿದಾಗ ಅವರು ಮರುಮಾತನಾಡದೆ ತಮ್ಮ ಸ್ಥಾನ ತ್ಯಜಿಸಿದ್ದರು. ಈಗ ಅಂಥವರು ಎಲ್ಲಿದ್ದಾರೆ. ಕತ್ತು ಹಿಡಿದು ತಳ್ಳಿದರೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದರು.

ಏಕಾಂಗಿ ಶೆಟ್ಟರ್‌
ಜಗದೀಶ್‌ ಶೆಟ್ಟರ್‌ ಪಟ್ಟು ಬಿಡದೆ ರಮೇಶ್‌ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿದಾಗ ಆಡಳಿತ ಪಕ್ಷದ ಸದಸ್ಯರು ಅವರ ವಿರುದ್ಧ ತಿರುಗಿಬಿದ್ದರು. ಈ ಸಂದರ್ಭದಲ್ಲಿ ಜಗದೀಶ್‌ ಶೆಟ್ಟರ್‌ ಒಬ್ಬರೇ ಅವರಿಗೆ ಪ್ರತ್ಯುತ್ತರ ನೀಡಿದರೇ ಹೊರತು ಬಿಜೆಪಿ ಸದಸ್ಯರು ಅವರಿಗೆ
ಬೆಂಬಲ ವ್ಯಕ್ತಪಡಿಸಲಿಲ್ಲ. ಹೀಗಾಗಿ ಕಾಂಗ್ರೆಸ್‌ ಸದಸ್ಯರೊಂದಿಗೆ ಏಕಾಂಗಿಯಾಗಿ ವಾದ ಮಂಡಿಸಲು ಸಾಧ್ಯವಾಗದ ಶೆಟ್ಟರ್‌, 
ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಸಭಾತ್ಯಾಗ ಮಾಡುವುದಾಗಿ ಹೇಳಿ ಸದನದಿಂದ ಹೊರನಡೆದರು. ಬಳಿಕ ಬಿಜೆಪಿ ಸದಸ್ಯರು ಅವರ ಹಿಂದೆ ಹೋದರು. 

ಟಾಪ್ ನ್ಯೂಸ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Mamatha

West Bengal: ಬಾಂಗ್ಲಾ ಜೊತೆ ನೀರು ಹಂಚಿಕೆ ಮಾತುಕತೆಗೆ ಸಿಎಂ ಮಮತಾ ಆಕ್ಷೇಪ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

1-dd

Tulu Nadu ದೈವ ದೇವರ ಹೆಸರಿನಲ್ಲಿ ಬ್ರಿಜೇಶ್ ಚೌಟ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

1-sadsadsad

Revanna; ಪ್ರಜ್ವಲ್ ಗೆ 14 ದಿನ ನ್ಯಾಯಾಂಗ ಬಂಧನ: ಸೂರಜ್ ಜುಲೈ 1ರವರೆಗೆ ಸಿಐಡಿ ವಶಕ್ಕೆ

1-woqf

Waqf ಒತ್ತುವರಿ ಆಸ್ತಿ ಸಮುದಾಯದ ಏಳ್ಗೆಗೆ ಬಳಕೆ: ಸಚಿವ ಜಮೀರ್

yatnal

BJP ಹೈಕಮಾಂಡ್ ಗೆ ದೊಡ್ಡವರ ಪಕ್ಷ ವಿರೋಧಿ ಚಟುವಟಿಕೆ ಮಾಹಿತಿ: ಯತ್ನಾಳ್

tankar

ಆನಂದಪುರ – ಶಿಕಾರಿಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.