ಎರಡು ದಿನದೊಳಗೆ ಬ್ರಿಟನ್ ನಿಂದ ಬಂದವರನ್ನು ಪತ್ತೆ ಹಚ್ಚುತ್ತೇವೆ: ಸಚಿವ ಸುಧಾಕರ್
Team Udayavani, Dec 28, 2020, 1:50 PM IST
ಬೆಂಗಳೂರು: ಬ್ರಿಟನ್ ನಿಂದ ಬಂದವರನ್ನು ಎರಡು ದಿನದೊಳಗೆ ಪತ್ತೆ ಹಚ್ಚಲಾಗುತ್ತದೆ. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಆರೋಗ್ಯ ಸಚಿವ ಸುಧಾಕರ್ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಯು.ಕೆಯಿಂದ ಬಂದವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಈ ಬಗ್ಗೆ ಗೃಹ ಸಚಿವರ ಜೊತೆ ಚರ್ಚೆ ನಡೆಸಿದ್ದೇವೆ. ಎರಡು ದಿನಗಳೊಳಗೆ ಅವರನ್ನು ಪತ್ತೆ ಹಚ್ಚಲಾಗುತ್ತದೆ ಎಂದರು.
ಇದನ್ನೂ ಓದಿ:ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿ: ಸಚಿವ ಪ್ರಭು ಚವ್ಹಾಣ್
ಡಿ.30, 31ರಂದು ಹೊಸ ವರ್ಷವನ್ನು ಸರಳವಾಗಿ, ಅರ್ಥಗರ್ಭಿತವಾಗಿ ಆಚರಿಸಬೇಕು. ವಿಸ್ತೃತ ಮಾರ್ಗಸೂಚಿ ಬಗ್ಗೆ ಚರ್ಚೆ ಮಾಡಿದ್ದೇವೆ. ಗೃಹ ಇಲಾಖೆಯಿಂದ ಸಂಜೆ ಸಂಪೂರ್ಣ ಮಾರ್ಗಸೂಚಿ ಬಿಡುಗಡೆ ಆಗಲಿದೆ. ಬೆಂಗಳೂರು ಮತ್ತು ಬೇರೆ ಜಿಲ್ಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುತ್ತದೆ ಎಂದು ಹೇಳಿದರು.
ರಾತ್ರಿ ಕರ್ಫ್ಯೂ ಇಲ್ಲ
ಹೊಸ ವರ್ಷಾಚರಣೆಗೆ ಮಾರ್ಗಸೂಚಿಗಳನ್ನು ರಚಿಸುವ ಬಗ್ಗೆ ಚರ್ಚೆಯಾಗಿದೆ ಆರೋಗ್ಯಾಧಿಕಾರಿಗಳು. ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿ ಸಭೆ ನಡೆಸಲಾಗಿದೆ. ಡಿ. 17 ರಂದು ಹೊರಡಿಸಿರುವ ಮಾರ್ಗಸೂಚಿಗಳನ್ನು ಸ್ವಲ್ಪ ಮಾರ್ಪಾಡು ಮಾಡಿ ಹೊಸದಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರು ಮಾರ್ಗಸೂಚಿಯನ್ನು ನಗರ ಪೊಲೀಸ್ ಆಯುಕ್ತರು ಮಾರ್ಗಸೂಚಿ ಹೊರಡಿಸಲಿದ್ದಾರೆ. ರಾಜ್ಯಾದ್ಯಂತ ಡಿಜಿ ಎಸ್ಪಿ ಹಾಗೂ ಡಿಸಿ ಗಳಿಗೆ ಮಾರ್ಗಸೂಚಿ ಹೊರಡಿಸಲಿದ್ದಾರೆ. ರಾತ್ರಿ ಕರ್ಫ್ಯೂ ಇರುವುದಿಲ್ಲ. ಕೆಲವು ಪ್ರದೇಶದಲ್ಲಿ ಪರಿಸ್ಥಿತಿ ನೋಡಿಕೊಂಡು ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…