ಹಿಜಾಬ್ ಕುರಿತಾಗಿ ‘ಹೈ’ ತೀರ್ಪು: ಮಹತ್ತರ ತೀರ್ಪಿನಲ್ಲಿ ಹೈಕೋರ್ಟ್ ಉಲ್ಲೇಖಿಸಿದ ಅಂಶಗಳೇನು?


Team Udayavani, Mar 15, 2022, 11:35 AM IST

ಹಿಜಾಬ್ ಕುರಿತಾಗಿ ‘ಹೈ’ ತೀರ್ಪು: ಮಹತ್ತರ ತೀರ್ಪಿನಲ್ಲಿ ಹೈಕೋರ್ಟ್ ಉಲ್ಲೇಖಿಸಿದ ಅಂಶಗಳೇನು?

ಬೆಂಗಳೂರು: ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಪ್ರಕರಣದ ತೀರ್ಪನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ಮಂಗಳವಾರ ಪ್ರಕಟಿಸಿದೆ. ವಿವಾದಗಳು, ಪ್ರತಿಭಟನೆಗಳು, ಆರೋಪ- ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಹಿಜಾಬ್ ವಿಚಾರದ ಕುರಿತು ಇಂದು ಹೈಕೋರ್ಟ್ ತೀರ್ಪು ನೀಡಿದೆ.

ಹೈಕೋರ್ಟ್ ಕೇಳಿಕೊಂಡಿದ್ದ ಪ್ರಶ್ನೆಗಳು

1 ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅಡಿಯಲ್ಲಿ ಅಗತ್ಯವಾದ ಧಾರ್ಮಿಕ ಆಚರಣೆಯ ಭಾಗವಾಗಿದೆಯೇ?

2 ಅರ್ಜಿದಾರರ ಮೂಲಭೂತ ಹಕ್ಕುಗಳನ್ನು ಗಮನದಲ್ಲಿಟ್ಟುಕೊಂಡು ಶಾಲಾ ಸಮವಸ್ತ್ರದ ನಿಯಮವನ್ನು ಕಾನೂನುಬದ್ಧವಾಗಿ ಅನುಮತಿಸಲಾಗಿದೆಯೇ?

3 ಫೆಬ್ರುವರಿ 5 ರ ಸರ್ಕಾರದ ಆದೇಶ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯೇ.? ಏಕಪಕ್ಷೀಯವಾಗಿ ಸರ್ಕಾರ ಆದೇಶ ನೀಡಿದೆಯೇ?

ಈ ಕುರಿತು ಇಂದು ತೀರ್ಪು ನೀಡಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌, ನ್ಯಾ. ಖಾಜಿ ಜೈಬುನ್ನಿಸಾ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ರಿಟ್ ಅರ್ಜಿಗಳನ್ನು ವಜಾ ಮಾಡಿದೆ.

ಕೋರ್ಟ್ ತೀರ್ಪಿನ ಪ್ರಮುಖ ಅಂಶಗಳು

1 ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಮಿನ ಅತ್ಯಗತ್ಯ ಆಚರಣೆ ಅಲ್ಲ.

2 ಸಮವಸ್ತ್ರ ನಿಗದಿಪಡಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ.

3 ಸರ್ಕಾರದ ವಸ್ತ್ತಸಂಹಿತೆ ಪ್ರಶ್ನಿಸುವಂತಿಲ್ಲ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧಿಸಿ ಸರ್ಕಾರ ಫೆ.5ರಂದು ಹೊರಡಿಸಿದ್ದ ಆದೇಶ ಕಾನೂನು ಬದ್ದವಾಗಿದೆ.

ಇದನ್ನೂ ಓದಿ:ವಿದ್ಯೆಗಿಂತ ದೊಡ್ಡದು ಯಾವುದೂ ಇಲ್ಲ, ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು: ಬೊಮ್ಮಾಯಿ

4 ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅನುಮತಿ ಕೋರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧಿಸಿ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ಹಿನ್ನೆಲೆ: ಉಡುಪಿಯ ಕಾಲೇಜಿನಲ್ಲಿ ಆರಂಭವಾದ ಹಿಜಾಬ್- ಕೇಸರಿ ಶಾಲು ವಿವಾದ ನಂತರ ರಾಜ್ಯದ ಹಲವು ಜಿಲ್ಲೆಗಳಿಗೆ ಹಬ್ಬಿತ್ತು. ಹಲವೆಡೆ ಪ್ರತಿಭಟನೆಗಳು ನಡೆದಿದ್ದವು. ನಂತರ ಸರ್ಕಾರ ಶಿಕ್ಷಣ ಸಂಸ್ಥೆಗಳಿಗೆ ವಸ್ತ್ರಸಂಹಿತೆ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಕೋರ್ಟ್ ಮೆಟ್ಟಿಲೇರಿದ್ದರು.

ಕಾಲೇಜುಗಳಲ್ಲಿ ಹಿಜಾಬ್‌ ನಿರ್ಬಂಧಿಸಿರುವ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರಸಂಹಿತೆ ಜಾರಿ ಸಂಬಂಧ ಕಳೆದ ಫೆ.5ರಂದು ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕೆಲ ಮುಸ್ಲಿಂ ವಿದ್ಯಾರ್ಥಿನಿಯರೂ ಸೇರಿ 10ಕ್ಕೂ ಅಧಿಕ ಅರ್ಜಿಗಳು ಹಾಗೂ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಎಲ್ಲ ಅರ್ಜಿಗಳ ಕುರಿತು ಸತತ 11 ದಿನಗಳ ಕಾಲ ಸುದೀರ್ಘ‌ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌, ನ್ಯಾ. ಖಾಜಿ ಜೈಬುನ್ನಿಸಾ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ವಿಚಾರಣೆ ಪೂರ್ಣಗೊಳಿಸಿ ಫೆ.25ರಂದು ತೀರ್ಪು ಕಾಯ್ದಿರಿಸಿತ್ತು

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.