ನನ್ನ ರಾಜೀನಾಮೆ ಕೇಳಲು ಸಿದ್ದರಾಮಯ್ಯ ಗೆ ಯಾವ ನೈತಿಕತೆ ಇದೆ?: ಸಿಎಂ ಬೊಮ್ಮಾಯಿ
Team Udayavani, Jul 5, 2022, 4:18 PM IST
ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ರಾಜೀನಾಮೆ ನೀಡಬೇಕೆಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಈ ಮಾನದಂಡದಲ್ಲಿ ಹೇಳುವುದಾದರೆ ಸಿದ್ದರಾಮಯ್ಯ ಹತ್ತು ಸಲ ರಾಜೀನಾಮೆ ಕೊಡಬೇಕಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.
ಸುದ್ದಗಾರರೊಂದಿಗೆ ಮಾತನಾಡಿದ ಅವರು, ಅವರು ಹಿಂದೆ ಅಧಿಕಾರದಲ್ಲಿದ್ದಾಗ ಇದೇ ಪೊಲೀಸ್ ನೇಮಕಾತಿ ವಿಚಾರದಲ್ಲಿ ಗುಲ್ಬರ್ಗಾದಲ್ಲಿ ಪ್ರಶ್ನೆಪತ್ರಿಕೆ ಲೀಕ್ ಆಗಿತ್ತು. ಪ್ರಶ್ನೆಪತ್ರಿಕೆ ಸಿದ್ದ ಮಾಡಿದ್ದ ಡಿಐಜಿ ಮನೆಯಿಂದಲೇ ಲೀಕ್ ಆಗಿತ್ತು. ಅದು ತನಿಖೆಯಾಗಿ ಆ ಡಿಐಜಿಯನ್ನು ಆರೋಪಿ ಎಂದು ಹೆಸರಿಸಲಾಗಿತ್ತು. ಮುಂದೆ ಈ ಪ್ರಕರಣ ಏನಾಯಿತು? ಅವರು ಯಾವ ಕ್ರಮ ಕೈಗೊಂಡಿದ್ದರು? ಆ ಡಿಐಜಿಯನ್ನು ಅಮಾನತು ಮಾಡಿದ್ದರಾ? ಬಂಧಿಸಿದ್ದರೇ? ನನ್ನ ರಾಜೀನಾಮೆ ಕೇಳಲು ಸಿದ್ದರಾಮಯ್ಯಗೆ ಯಾವ ನೈತಿಕತೆಯಿದೆ ಎಂದರು.
ಇದನ್ನೂ ಓದಿ:ಭಾರತದ ಸಂವಿಧಾನ ತುಂಬಾ ಸುಂದರ…ಆದರೆ…ಕೇರಳ ಸಚಿವ ಸಾಜಿ ಹೇಳಿದ್ದೇನು?
ಸಚಿವ ಆರ್.ಅಶೋಕ್ ಮಾತನಾಡಿ, ಪಿಎಸ್ ಐ ಅಕ್ರಮ ನೇಮಕ ಕುರಿತು ನಿನ್ನೆಯೇ ಸಿಎಂ ಸ್ಪಷ್ಟವಾಗಿ ನಿಲುವು ತೆಗೆದುಕೊಂಡಿದ್ದಾರೆ. ಹಿಂದೆ ಕೂಡ ಅನೇಕ ಸರ್ಕಾರದ ಮೇಲೆ ಆಪಾದನೆ ಬಂದಿತ್ತು. ಆದರೆ ಅದನ್ನು ಮುಚ್ಚಿ ಹಾಕುತ್ತಿದ್ದರು. ನಮ್ಮ ಸಿಎಂ ಎಲ್ಲರಿಗೂ ಸ್ವಾತಂತ್ರ್ಯ ನೀಡಿದ ಕಾರಣ ಬಂಧನವಾಗಿದೆ. ಬೇರೆ ಸರ್ಕಾರದ ರೀತಿ ಇದ್ದಿದ್ದರೆ ಇದು ಹೊರಗೆ ಬರುತ್ತಿರಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೊಮ್ಮಾಯಿ ನೇತೃತ್ವದಲ್ಲೇ ಅವಧಿ ಪೂರ್ಣ: ಕೇಂದ್ರ ಸಚಿವ ನಾರಾಯಣಸ್ವಾಮಿ
ಹೆಸರಿಗಷ್ಟೇ ಸಂಸ್ಕೃತಿ ಇಲಾಖೆ: ಕಲಾವಿದರ ಗೋಳಿಗೆ ಸ್ಪಂದನೆಯೇ ಇಲ್ಲ!
ಕಾಂಗ್ರೆಸ್ ಈಗ ಡಬಲ್ ಡೋರ್ ಬಸ್: ಸಚಿವ ಸುಧಾಕರ್ ವ್ಯಂಗ್ಯ
ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳನ್ನು ನಿರಾಕರಿಸಿದರೆ ಕಠಿಣ ಕ್ರಮ: ಡಾ.ಕೆ.ಸುಧಾಕರ್
ಮುಂದಿನ ದಿನಗಳಲ್ಲಿ ವೀರಶೈವ ಲಿಂಗಾಯತ ಸಮಾಜದ ಇನ್ನೂ ಎರಡು ಪೀಠ