ಯಾವ ಸಾಧನೆಗೆ 100 ಕೋಟಿ ಲಸಿಕೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ?

Team Udayavani, Oct 22, 2021, 9:31 AM IST

siddaramaiah

ಬೆಂಗಳೂರು: ದೇಶದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ ಪೂರೈಸಿದ ವಿಚಾರಕ್ಕೆ ಕಾಂಗ್ರೆಸ್ ಟೀಕೆ ಮುಂದುವರಿದಿದೆ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ಸಂಭ್ರಮಾಚರಣೆಯು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದ್ದಾರೆ.

ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ ನೀಡಿರುವ ನರೇಂದ್ರ ಮೋದಿ ಸರ್ಕಾರ, ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದಿದ್ದಾರೆ.

ದೇಶದಲ್ಲಿ ಇಲ್ಲಿಯವರೆಗೆ 29 ಕೋಟಿ ಜನರಿಗೆ ಎರಡು ಡೋಸ್ ಮತ್ತು 42 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಮಾತ್ರ ನೀಡಲಾಗಿದೆ. 139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ. ಯಾವ ಸಾಧನೆಗೆ ಸಂಭ್ರಮಾಚರಣೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

ಘೋಷಿತ ಗುರಿಯಂತೆ ದೇಶದ 103 ಕೋಟಿ ವಯಸ್ಕರಿಗೆ ಡಿಸೆಂಬರ್ 31ರೊಳಗೆ 2 ಡೋಸ್ ನೀಡಲು 206 ಕೋಟಿ ಲಸಿಕೆ ಬೇಕಾಗಿದೆ. ಕೊಟ್ಟಿರುವುದು 100 ಕೋಟಿ ಮಾತ್ರ. ಗುರಿ ತಲುಪಲು ಪ್ರತಿದಿನ 1.51 ಕೋಟಿ ಲಸಿಕೆ ನೀಡಬೇಕಾಗಿದೆ ಇದಕ್ಕಾಗಿ ಬೇಕಾಗಿರುವುದು ಸಿದ್ದತೆ, ಖಾಲಿ ತಟ್ಟೆಯ ಪ್ರಚಾರ ಅಲ್ಲ. ಅಮೆರಿಕ 56%, ಚೀನಾ 70% ಜನಸಂಖ್ಯೆಗೆ ಎರಡು ಡೋಸ್ ಕೋವಿಡ್ ಲಸಿಕೆ ನೀಡಿ ಬೂಸ್ಟರ್ ಲಸಿಕೆ ನೀಡುವ ಸಿದ್ದತೆಯಲ್ಲಿದೆ.  ಭಾರತದಲ್ಲಿ ಕೇವಲ 21% ಜನಸಂಖ್ಯೆಗೆ ಮಾತ್ರ ಎರಡು ಡೋಸ್ ಲಸಿಕೆ ನೀಡಲಾಗಿದೆ. ಯಾವ ಸಾಧನೆಗೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ ಎಂದಿದ್ದಾರೆ.

ಸುಳ್ಳು ಸಾಧನೆಗಳ ಖಾಲಿ ತಟ್ಟೆ ಬಡಿಯುತ್ತಾ ದೇಶದ ಜನರನ್ನು ಮರುಳು ಮಾಡುತ್ತಾ ಬಂದ ನರೇಂದ್ರ ಮೋದಿ ಅವರೇ? ಮೊದಲು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಎರಡು ಡೋಸ್ ಲಸಿಕೆ ನೀಡಲು ಗಂಭೀರವಾಗಿ ಸರ್ಕಾರವನ್ನು ತೊಡಗಿಸಿಕೊಳ್ಳಿ. ಸಾಧನೆಯ ಸಂಭ್ರಮಾಚರಣೆ ಆ ಮೇಲೆ ಮಾಡೋಣ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.