ಡೆಮಾಲಿಷನ್‌ಗೆ ತಡವೇಕೆ?: ಅಧಿಕಾರಿಗಳಿಗೆ ಸಚಿವ ಡಾ.ನಾರಾಯಣಗೌಡ ತರಾಟೆ

ಆರು ವಾರಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗಡುವು

Team Udayavani, Aug 25, 2022, 10:23 PM IST

narayana-gowda

ಬೆಂಗಳೂರು: ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಸುತ್ತಮುತ್ತ ನಿಯಮ ಮೀರಿ ನಿರ್ಮಿಸಿರುವ ಕಟ್ಟಡಗಳ ಡೆಮಾಲಿಷನ್‌ಗೆ ಬಿಬಿಎಂಪಿ ಆದೇಶವಿದ್ದರೂ, ನಿಧಾನಗತಿ ಧೋರಣೆ ಅನುಸರಿಸುತ್ತಿರುವ ಅಧಿಕಾರಿಗಳನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತರಾಟೆ ತೆಗೆದುಕೊಂಡರು.

ಇಂದು ವಿಕಾಸಸೌಧದಲ್ಲಿ ಜಕ್ಕೂರು ವೈಮಾನಿಕ ತರಬೇತಿ ಶಾಲೆ ಆಡಳಿತ ಮಂಡಳಿ ಸಭೆ ನಡೆಸಿದ ಸಚಿವ ಡಾ.ನಾರಾಯಣಗೌಡ ಅವರು, ನಿಯಮ ಮೀರಿ ಕಟ್ಟಡ ನಿರ್ಮಿಸಿರುವವರ ವಿರುದ್ಧ ಕ್ರಮಕ್ಕೆ ಈ ಹಿಂದೆಯೇ ಸೂಚಿಸಲಾಗಿತ್ತು. ಬಿಬಿಎಂಪಿಯಿಂದ ಸರ್ವೆ ನಡೆಸಿ, ನಿಯಮ ಉಲ್ಲಂಘಿಸಿರುವ ಕಟ್ಟಡಗಳ ಡೆಮಾಲಿಷನ್‌ಗೆ ಬಿಬಿಎಂಪಿ ಆದೇಶಿಸಿದ್ದರೂ ಕ್ರಮಕ್ಕೆ ತಡವಾಗುತ್ತಿರುವುದೇಕೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬಿಬಿಎಂಪಿ ಆದೇಶದನ್ವಯ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇದರ ಜೊತೆಗೆ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆಯಲ್ಲಿ ನೀಡುತ್ತಿರುವ ತರಬೇತಿ ಬಗ್ಗೆ ಹೆಚ್ಚಿನ ಪ್ರಚಾರ ನೀಡುವ ದಾಖಲಾತಿ ಹೆಚ್ಚಿಸಬೇಕು ಎಂದು ಡಾ.ನಾರಾಯಣಗೌಡ ಅವರು ಸೂಚಿಸಿದರು.

ಸರ್ಕಾರಿ ವೈಮಾನಿಕ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳಿಗೂ ಪೈಲಟ್ ತರಬೇತಿ ಸಿಗಬೇಕು ಎಂಬುದು ನಮ್ಮ ಸರ್ಕಾರದ ಆಶಯ. ಈ ಬಗ್ಗೆ ಅಗತ್ಯ ಪ್ರಚಾರ ನೀಡುವ ಮೂಲಕ ದಾಖಲಾತಿ ಪ್ರಮಾಣ ಹೆಚ್ಚಿಸಬೇಕು ಎಂದು ಸೂಚಿಸಿದರು. ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಹಲವರು ಸ್ಪಾನ್ಸರ್ ನೀಡಲು ಮುಂದೆ ಬಂದಿದ್ದಾರೆ ಎಂದು ಹೇಳಿದರು.

ಅಲ್ಲದೇ, ಹಲವು ಖಾಸಗಿ ಏರ್ ಲೈನ್ಸ್‌ಗಳು ಹಲವು ದಿನಗಳಿಂದ ಬಾಡಿಗೆ ಬಾಕಿ ಉಳಿಸಿಕೊಂಡಿದ್ದು ಕೂಡಲೇ ಬಾಕಿ ವಸೂಲಿಗೆ ಅಗತ್ಯ ಕ್ರಮಕೈಗೊಳ್ಳುವಂತೆ ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದರು.

ಸರ್ಕಾರಿ ವೈಮಾನಿಕ ತರಬೇತಿ ಶಾಲೆಯಲ್ಲಿ ರಾತ್ರಿ ವೇಳೆ ವಿಮಾನ ‌ಲ್ಯಾಂಡಿಂಗ್ ನೈಟ್ ಲ್ಯಾಂಡಿಂಗ್ ಲ್ಯಾಂಪ್ ಅಳವಡಿಸಲು ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದ್ದು, ಆರು ವಾರಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗಡುವು ನೀಡಿದರು.

ಗ್ರಾಮೀಣ ಕ್ರೀಡೋತ್ಸವ ಅದ್ದೂರಿಯಾಗಿ ಆಚರಿಸಲು  ಸೂಚನೆ

ಇದೇ ವೇಳೆ ಗ್ರಾಮೀಣ ಕ್ರೀಡಾಕೂಟದ ಆಯೋಜನೆ ಬಗ್ಗೆ ಚರ್ಚಿಸಿದರು. ಗ್ರಾಮೀಣ ಕ್ರೀಡಾಕೂಟ ಮುಖ್ಯಮಂತ್ರಿಗಳ ಕನಸಾಗಿದ್ದು, ರಾಷ್ಟ್ರೀಯ ಕ್ರೀಡಾ ದಿನವಾದ ಆಗಸ್ಟ್ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಲಿದ್ದಾರೆ. ಗ್ರಾಮೀಣ ಕ್ರೀಡಾಕೂಟ ಅದ್ದೂರಿಯಾಗಿ ಆಚರಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಿ ಎಂದು ಸೂಚಿಸಿದರು. ಅದೇ ದಿನ ಏಕಲವ್ಯ, ಕ್ರೀಡಾ ರತ್ನ ಪ್ರಶಸ್ತಿ, ಸಹಸ್ರ ಕ್ರೀಡಾ ಪ್ರತಿಭಾ ಯೋಜನೆಯಡಿ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ನೀಡಲಾಗುತ್ತದೆ. ಅದಕ್ಕೆ ಅಗತ್ಯವಿರುವ ಎಲ್ಲಾ ಸಿದ್ದತೆ ಮಾಡಿಕೊಳ್ಳುವಂತೆ ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆಯುಕ್ತ ಗೋಪಾಲಕೃಷ್ಣ, ಜಕ್ಕೂರು ಸರ್ಕಾರಿ ವೈಮಾನಿಕ ಶಾಲೆಯ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.