ಪೂರ್ಣ ಪ್ರಮಾಣದ ಸಂಪುಟ ರಚನೆ ಯಾಕಿಲ್ಲ?
Team Udayavani, Aug 27, 2019, 3:00 AM IST
ಬೆಂಗಳೂರು: ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳಾದರೂ ಪೂರ್ಣ ಪ್ರಮಾಣದ ಸಂಪುಟ ರಚಿಸಲು ಸಾಧ್ಯವಾಗದಿರುವುದು ಅವರ ವೈಫಲ್ಯಕ್ಕೆ ಸಾಕ್ಷಿ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿದ ಅವರು, ಹಿಂದಿನ ಸಮ್ಮಿಶ್ರ ಸರ್ಕಾರದ ಮೇಲೆ ಕಾರಣ ಇಲ್ಲದೆ ಆರೋಪಗಳನ್ನು ಮಾಡುತ್ತಿದ್ದ ಬಿಜೆಪಿಯವರು ತಿಂಗಳಾದರೂ ಯಾಕೆ ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ.
ರಾಜ ಪ್ರಭುತ್ವದಲ್ಲಿ ಏಕ ಚಕ್ರಾಧಿಪತ್ಯದ ಆಡಳಿತವನ್ನು ನಾವು ಇತಿಹಾಸದಲ್ಲಿ ಓದಿದ್ದೆವು. ಬಿಜೆಪಿ ನಮ್ಮ ರಾಜ್ಯಕ್ಕೆ ಯಡಿಯೂರಪ್ಪ ಅವರ ಏಕ ಚಕ್ರಾಧಿಪತ್ಯದ ಆಡಳಿತ ವನ್ನು ನೀಡುವ ಮೂಲಕ ಜನತಂತ್ರದಲ್ಲೂ ಇದು ಸಾಧ್ಯ ಎಂದು ರುಜುವಾತು ಮಾಡಿದೆ. ಇದಕ್ಕಾಗಿ ಬಿಜೆಪಿ ಮತ್ತು ಸಂಘ ಪರಿವಾರಕ್ಕೆ ಅಭಿನಂದನೆಗಳು ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ