ಅಮಿತ್ ಶಾ ರಾಜ್ಯ ಭೇಟಿಯ ವೇಳೆ ಸಂಪುಟ ವಿಸ್ತರಣೆ ಚರ್ಚೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ
Team Udayavani, Apr 29, 2022, 11:07 AM IST
ಬೆಂಗಳೂರು: ಇಂದಿನ ದೆಹಲಿ ಪ್ರವಾಸದಲ್ಲಿ ಯಾವುದೇ ಕೇಂದ್ರ ಸಚಿವರು ಹಾಗೂ ಪಕ್ಷದ ನಾಯಕರನ್ನು ಭೇಟಿ ಮಾಡುವುದಿಲ್ಲ. ಆದರೆ ಅಮಿತ್ ಶಾ ಮೇ.3ರಂದು ರಾಜ್ಯಕ್ಕೆ ಬಂದಾಗ ಸಂಪುಟದ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಖಾಲಿ ಇರುವ ಸಚಿವ ಸ್ಥಾನ ತುಂಬುವ ಬಗ್ಗೆ ವರಿಷ್ಠರ ಗಮನಕ್ಕೆ ತರಲಾಗಿದೆ. ಹೀಗಾಗಿ ಅಮಿತ್ ಶಾ ಬಂದಾಗ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.
ಇದನ್ನೂ ಓದಿ:ಸದ್ಯದಲ್ಲೇ 6ರಿಂದ 12 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ ಆರಂಭ: ಸಚಿವ ಸುಧಾಕರ್
ಇಂದು ಸಂಜೆ ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ಜಡ್ಜ್ ಗಳು, ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗಿಯಾಗುತ್ತೇನೆ. ನಂತರ ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಬರುತ್ತೇನೆ ಎಂದು ಸಿಎಂ ಮಾಹಿತಿ ನೀಡಿದರು.
ಆಕಾಂಕ್ಷಿಗಳ ಭೇಟಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಭೇಟಿ ಮುಂದುವರಿದಿದೆ.
ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ನೆಹರು ಓಲೇಕಾರ ಆರ್ ಟಿ ನಗರದ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ