ಉ.ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಬಗ್ಗೆ ಶೀಘ್ರ ನಿರ್ಧಾರ: ಕೆ.ಸುಧಾಕರ್
Team Udayavani, Jul 25, 2022, 10:54 AM IST
ಬೆಂಗಳೂರು: ಶಿರೂರು ಟೋಲ್ ಗೇಟ್ ನಲ್ಲಿ ಇತ್ತೀಚೆಗೆ ನಡೆದ ಆ್ಯಂಬುಲೆನ್ಸ್ ಅಪಘಾತದ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಿಸಬೇಕು ಎಂಬ ಆಗ್ರಹ ಮತ್ತೆ ಮುನ್ನೆಲೆಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಭಿಯಾನಗಳು ನಡೆಯುತ್ತಿದೆ. ಇದೇ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೂ ಸರ್ಕರದ ಗಮನ ಸೆಳೆಯುವ ಕೆಲಸ ಮಾಡಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಕೆ.ಸುಧಾಕರ್, ‘’ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ. ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡುತ್ತಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ:ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಉತ್ತರ ಕನ್ನಡ ಜನರ ಹೋರಾಟ: ಬೆಂಬಲ ನೀಡಿದ ಕುಮಾರಸ್ವಾಮಿ
ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ ಆದಷ್ಟು ಬೇಗ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುಧಾಕರ್ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!