ಎತ್ತಿನಹೊಳೆ ಹೋರಾಟ ಸಮಿತಿಗೆ ಹಿನ್ನಡೆ; ಹಸಿರು ನ್ಯಾಯಪೀಠ ಹೇಳಿದ್ದೇನು?

Team Udayavani, Feb 6, 2017, 1:27 PM IST

ಚೆನ್ನೈ: ಎತ್ತಿನಹೊಳೆ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಚೆನ್ನೈನ ಹಸಿರು ನ್ಯಾಯಾಧಿಕರಣ ಪೀಠ, ಎತ್ತಿನಹೊಳೆ ನೀರಾವರಿ ಹೋರಾಟದ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಎತ್ತಿನಹೊಳೆ ನೀರಾವರಿ ಯೋಜನೆ ಬಗ್ಗೆ ಪರಿಸರ ಮೌಲ್ಯಮಾಪನದ ವರದಿ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಎನ್ ಜಿಟಿಗೆ ಪ್ರಮಾಣಪತ್ರ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಹಸಿರು ನ್ಯಾಯಾಧಿಕರಣ ಪೀಠದ ಮುಖ್ಯಸ್ಥರಾದ ನ್ಯಾ. ಸ್ವತಂತ್ರಕುಮಾರ್ ಅವರು,ಕುಡಿಯುವ ನೀರಿನ ಯೋಜನೆಗೆ ಮೌಲ್ಯಮಾಪನ ಬೇಕಿಲ್ಲ ಎಂದು ಕೇಂದ್ರ ಪ್ರಮಾಣಪತ್ರ ಸಲ್ಲಿಸಿದೆ. ಅಗತ್ಯವಿದ್ದರೆ ಪರಿಸರ ಹೋರಾಟಗಾರರು ಸುಪ್ರೀಂಕೋರ್ಟ್ ಗೆ ಹೋಗಬಹುದು ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಎತ್ತಿನಹೊಳೆ ನೀರಾವರಿ ಯೋಜನೆ ಕುರಿತಂತೆ ಅಂತಿಮ ವಿಚಾರಣೆ ಮುಗಿದಿದೆ. ಕೇಂದ್ರ ಕೂಡಾ ಪ್ರಮಾಣಪತ್ರ ಸಲ್ಲಿಸಿದೆ. ಹಾಗಾಗಿ ಮಂಗಳವಾರ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸುವುದಾಗಿ ನ್ಯಾ.ಸ್ವತಂತ್ರಕುಮಾರ್ ತಿಳಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

  • ಹುಬ್ಬಳ್ಳಿ: ರಾಜ್ಯದ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ದಾಖಲೆ ಮತದಾನವಾಗಿದೆ. ಕುಂದಗೋಳದಲ್ಲಿ ಶೇ.82.42, ಚಿಂಚೋಳಿಯಲ್ಲಿ ಶೇ.71 ಮತದಾನವಾಗಿದೆ. ಅಲ್ಲಲ್ಲಿ...

  • ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಉಳಿಸಲು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಪ್ರಯತ್ನಪಡುತ್ತಿರುವಂತೆಯೇ, ಜೆಡಿಎಸ್‌ ಜತೆಗಿನ ಮೈತ್ರಿ ಖತಂಗೊಳಿಸುವುದೇ ಉತ್ತಮ...

  • ಬೆಂಗಳೂರು: ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ರೀತಿಯಲ್ಲಿ ಲೋಕಸಭಾ ಚುನಾವಣೋತ್ತರ ಸಮೀಕ್ಷಾ ಫ‌ಲಿತಾಂಶ ಹೊರಬಿದ್ದಿದ್ದು, ಮೈತ್ರಿ ಪಕ್ಷಗಳಿಗೆ ದೊಡ್ಡ ಆಘಾತ...

  • ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಿಗೆ ಭಾನುವಾರ ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು,...

  • ಕಲಬುರಗಿ: ಚಿಂಚೋಳಿ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನವರು ಮತದಾರರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಡಾ.ಉಮೇಶ ಜಾಧವ್‌ ಅವರು ಪೊಲೀಸ್‌...

ಹೊಸ ಸೇರ್ಪಡೆ