ನಿಮ್ಮನ್ನು ಮಲಗ್ಲಿಕ್ಕೆ ಬಿಡ್ತೀವಾ!;ಬಳ್ಳಾರಿಯಲ್ಲಿ ಗುಡುಗಿದ ರಾಮುಲು
Team Udayavani, May 20, 2018, 12:45 PM IST
ಬಳ್ಳಾರಿ: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ವಿರುದ್ಧ ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಕಿಡಿ ಕಾರಿದ್ದು , ‘ತಪ್ಪಿಸಿಕೊಂಡಿದ್ದೇವೆ ಎಂದು ತಿಳಿಯಬೇಡಿ , ಪ್ರಬಲ ವಿರೋಧ ಪಕ್ಷವಾಗಿ ನಿಮ್ಮನ್ನು ಮಲಗಲು ಬಿಡುವುದಿಲ್ಲ’ ಎಂದು ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು ‘ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಅಧಿಕಾರಕ್ಕೆ ಬಂದರೆ ಜೈಲು ಪಾಲಾಗುವ ಭೀತಿ ಎದುರಾಗಿತ್ತು. ಹೀಗಾಗಿ 78 ಸ್ಥಾನಗಳನ್ನು ಗೆದ್ದರೂ ಜೆಡಿಎಸ್‌ಗೆ ಬೆಂಬಲ ನೀಡಿ ಸರ್ಕಾರ ರಚನೆಗೆ ಮುಂದಾಗಿದೆ. ಸರ್ಕಾರದ ಅವಧಿಯಲ್ಲಿ ಮಾಡಿದ ಅಕ್ರಮಗಳನ್ನು ಮುಚ್ಚಿ ಹಾಕಲು ಮುಂದಾಗಿದೆ. ನಾವು ಬಿಡುವುದಿಲ್ಲ. ನಿಮ್ಮ ಅಕ್ರಮಗಳನ್ನು ಭ್ರಷ್ಟಾಚಾರಗಳನ್ನು ರಾಜ್ಯದ ಜನರ ಮುಂದೆ ಎಳೆ ಎಳೆಯಾಗಿ ಬಿಚ್ಚಿಡುವ ಕೆಲಸ ಮಾಡುತ್ತೇವೆ’ ಎಂದಿದ್ದಾರೆ.
‘ಲೋಕಾಯುಕ್ತವನ್ನು ಮುಚ್ಚಿ ಹಾಕಿ ಎಸಿಬಿ ರಚನೆ ಮಾಡಿ ಭ್ರಷ್ಟಾಚಾರಿಗಳಿಗೆ ಪ್ರಾಮಾಣಿಕರು ಎಂದು ಕ್ಲೀನ್ ಚಿಟ್ ನೀಡುವ ಕೆಲಸ ಮಾಡಿದ್ದಾರೆ. ಯಾವೆಲ್ಲಾ ಅಕ್ರಮಗಳನ್ನು ಮಾಡಿದ್ದಾರೋ ಅವುಗಳನ್ನು ಬಯಲು ಮಾಡುತ್ತೇವೆ’ ಎಂದು ಗುಡುಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ