ಪ್ರತಿ ದಿನ ಒಂದು ತಾಸು ಹೆಚ್ಚು ಕೆಲಸ ಮಾಡಿ: ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಕರೆ


Team Udayavani, Nov 10, 2022, 1:59 PM IST

13

ಬೆಂಗಳೂರು: ಪ್ರತಿ ದಿನ ಒಂದು ತಾಸು ಹೆಚ್ಚು ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಿ ನೌಕರರಿಗೆ ಕರೆ ನೀಡಿದರು.

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7 ನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ  ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರುಗಳ  ನಿಯೋಗವು ಇಂದು ಮುಖ್ಯ ಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿದರು.

ಕೆಳಹಂತದವರೆಗೆ ಈ ಕೆಲಸ ಆಗಬೇಕು. ಮುಂದಿನ ಕೆಲಸಗಳನ್ನು ನನಗೆ ಬಿಡಿ. ಎಲ್ಲರೂ ಒಂದಾಗಿ ಸುಭಿಕ್ಷ ನಾಡನ್ನು ಕಟ್ಟೋಣ. ಪ್ರಾಮಾಣಿಕತೆ, ನಿಷ್ಠೆ ಹಾಗು ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡಿ. ಬಡವರಿಗೆ, ಜನಪರವಾದ ಕೆಲಸ ಮಾಡಿದರೆ ಕರ್ನಾಟಕ ಅಭಿವೃದ್ಧಿಯಾಗುತ್ತದೆ. ನವ ಕರ್ನಾಟಕ ದಿಂದ ನವ ಭಾರತ ನಿರ್ಮಿಸೋಣ ಎಂದರು. ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕನಸಿಗೆ ಕರ್ನಾಟಕ ಒಂದು ಟ್ರಿಲಿಯನ್ ಡಾಲರ್ ಕೊಡುಗೆ ನೀಡಬೇಕು ಎಂದರು.

ಕರ್ನಾಟಕದಲ್ಲಿ ವೇತನ ಆಯೋಗವನ್ನು ಐದು ವರ್ಷವಾದ ಕೂಡಲೇ ಘೋಷಣೆಯಾಗಿರುವುದು ನಮ್ಮ ಸರ್ಕಾರದ ಅವಧಿಯಲ್ಲಿ ಎಂದರು.

ವರ್ಷದಿಂದ ವರ್ಷಕ್ಕೆ ಹಣದುಬ್ಬರ ಹೆಚ್ಚಾಗುತ್ತದೆ. ಸರ್ಕಾರಿ ನೌಕರರಾಗಿ ಸೇವೆಗೆ ಸೇರಿದ ಸಂದರ್ಭಕ್ಕೂ ಈಗಿನ ಸಂದರ್ಭಕ್ಕೂ ವ್ಯತ್ಯಾಸವಿರುತ್ತದೆ. ಸಮಯ ಮತ್ತು ಹಣ ಎರಡೂ ಬಹಳ ಮುಖ್ಯ. ಸರಿಯಾದ ಸಮಯದಲ್ಲಿ ಸರಿಯಾದ ಸಂಪಾದನೆಯಾದರೆ ಬದುಕಿಗೆ ಪ್ರೇರಣೆ. ಅದಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಬಿ.ಎಸ್.ಯಡಿಯೂರಪ್ಪ ಅವರು ಕೂಡ ಇದಕ್ಕೆ ಒತ್ತಾಸೆಯಾಗಿದ್ದರು. ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರೂ ಒತ್ತಾಯ ಮಾಡಿದ್ದರು ಎಂದರು.

ಅತ್ಯಂತ ಪ್ರಾಮಾಣಿಕ, ನಿಷ್ಠಾವಂತ ಅಧಿಕಾಯಾಗಿದ್ದ ಡಾ. ಸುಧಾಕರ್ ರಾವ್ ದಕ್ಷತೆಯಿಂದ ಕೆಲಸ ಮಾಡಿದವರು. ಪ್ರಭಾವಕ್ಕೆ ಮಣಿಯದವರು.  ನ್ಯಾಯಸಮ್ಮತವಾದ 7 ನೇ ವೇತನ ಆಯೋಗದ ವರದಿ ಬರಲಿ ಎಂದು ಶುದ್ಧಹಸ್ತ, ಶುದ್ಧ ಅಂತ:ಕರಣವುಳ್ಳ ಸುಧಾಕರ್ ರಾವ್ ಅವರ ಆಯ್ಕೆ ಆಗಿದೆ ಎಂದರು. ಇದಕ್ಕೆ ನೌಕರರ ಸಹಕಾರ ಕೂಡ ಅಗತ್ಯ. ಇದನ್ನು ಸಕಾರಗೊಳಿಸಿ ಎಲ್ಲರಿಗೂ ಒಳ್ಳೆಯದು ಆಗಬೇಕು. ಚಿಂತೆ ಮಾಡಬೇಡಿ. ಮುಂದಿನ ಸರ್ಕಾರ ನಮ್ಮದೇ ಬರಲಿದ್ದು, ಇದರ ಅನುಷ್ಠಾನ  ನಾವೇ ಮಾಡುತ್ತೇವೆ ಎಂದರು.

ಸರಕಾರಿ ನೌಕರರ ಸೇವೆಗೆ ಅಭಿನಂದನೆ

ವಿಶೇಷವಾಗಿ ಕೋವಿಡ್ ಸಂದರ್ಭದಲ್ಲಿ ಆರೋಗ್ಯ, ಪೊಲೀಸ್, ಗ್ರಾಮೀಣಾಭಿವೃದ್ಧಿ, ಕಂದಾಯ ಇಲಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿವೆ. ಕಂದಾಯ, ಲೋಕೋಪಯೋಗಿ, ಅಗ್ನಿಶಾಮಕ ಇಲಾಖೆ ಸೇರಿದಂತೆ ಬಹುತೇಕ ಎಲ್ಲಾ ಇಲಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿವೆ. ನಾನು ಮುಖ್ಯ ಮಂತ್ರಿಯಾದ ಸಂದರ್ಭದಲ್ಲಿ ಐದು ಸಾವಿರ ಕೋಟಿ ಆದಾಯ ಸಂಗ್ರಹ ಕೊರತೆ ಇತ್ತು. ಇದನ್ನು ಭರ್ತಿ ಮಾಡುವಂತೆ ಸೂಚಿಸಿದಾಗ ತೆರಿಗೆ ಇಲಾಖೆ ಅಧಿಕಾರಿಗಳು ಇದಕ್ಕೆ ಸ್ಪಂದಿಸಿ ಆ ಮೊತ್ತವನ್ನು ತುಂಬಿದ್ದಷ್ಟೇ ಅಲ್ಲದೆ, ಆ ವರ್ಷದ ಗುರಿಗಿಂತಲೂ 13 ಸಾವಿರ ಕೋಟಿ ರೂ.ಗಳ ಹೆಚ್ಚಿನ ಆದಾಯ ಸಂಗ್ರಹ ಮಾಡಿದರು ಎಂದರು.

ಸರ್ಕಾರದ ಮುಖ್ಯಸ್ಥನಾಗಿ ಸರಕಾರಿ ನೌಕರರ ಸೇವೆಯನ್ನು ಗುರುತಿಸುವುದಾಗಿ ತಿಳಿಸಿ ಅಭಿನಂದಿಸಿದ ಮುಖ್ಯಮಂತ್ರಿಗಳು ಅದೇ ಸಂದರ್ಭದಲ್ಲಿ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕೆಂಬ ತೀರ್ಮಾನ ಮಾಡಿದೆ. ಕೇಂದ್ರ ಸರ್ಕಾರ ಡಿಎ ಘೋಷಿಸಿದ 24 ಗಂಟೆಯೊಳಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತು. ಮತ್ತೊಂದು ಡಿಎ ಕೇಂದ್ರ ಸರ್ಕಾರಕ್ಕೆ ಬೆಳಿಗ್ಗೆ ಘೋಷಣೆ ಮಾಡಿದರೆ ಸಂಜೆ ರಾಜ್ಯ ದಲ್ಲಿ ಆದೇಶ ಹೊರಡಿಸಲಾಯಿತು ಎಂದರು.

ಜನಸ್ಪಂದನೆಯ ಕೆಲಸವಾಗಬೇಕು

ಕಾರ್ಯಾಂಗ ಜನಸ್ಪಂದನೆಯ ಕೆಲಸ ಮಾಡಿದಾಗ ಸರ್ಕಾರಕ್ಕೆ, ವ್ಯವಸ್ಥೆಗೆ ಒಳ್ಳೆಯ ಹೆಸರು ಬರುತ್ತದೆ.  ಜನಸಂಖ್ಯೆ ಹೆಚ್ಚಿದ್ದು, ಎಲ್ಲರ ಅಶೋತ್ತರಗಳೂ ಹೆಚ್ಚಾಗಿವೆ.

ಯುವಕರು, ವಿದ್ಯಾವಂತರ ನೌಕರರ ಜೀವನದ ಗುಣಮಟ್ಟವೂ ಉತ್ತಮಗೊಳ್ಳಬೇಕು. ಅವರು ಚೆನ್ನಾಗಿದ್ದರೆ ಸಂತೋಷದಿಂದಿದ್ದರೆ ಸರ್ಕಾರದ ಕೆಲಸಗಳು ಉತ್ತಮವಾಗಿ ಆಗುತ್ತದೆ. ವ್ಯವಸ್ಥೆಯಲ್ಲಿ ವೇತನ, ಸೌಲತ್ತು, ಪಿಂಚಣಿಯನ್ನು ಕಾಲಕಾಲಕ್ಕೆ ಪರಿಷ್ಕರಣೆ ಮಾಡಬೇಕು. ಇದು ಮೊದಲಿನಿಂದಲೂ ಬಂದಿದೆ. ಒಂದು ವೇತನ ಆಯೋಗಕ್ಕೂ ಮತ್ತೊಂದು ವೇತನ ಆಯೋಗದ ನಡುವೆ 5 ವರ್ಷಗಳ ಅಂತರವಿರಬೇಕು. ಆದರೆ ಬಹಳ ಸಾರಿ ಹಾಗಾಗುವುದಿಲ್ಲ. 6-7 ವರ್ಷ ತೆಗೆದುಕೊಂಡಿರುವ ಉದಾಹರಣೆ ಇದೆ. ನಮ್ಮ ಸರ್ಕಾರ ಕೋವಿಡ್ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ, ತಮ್ಮ ಜೀವದ ಹಂಗನ್ನು ತೊರೆದು ಸರ್ಕಾರಕ್ಕೆ ಸಹಾಯಕವಾಗಿ ನಿಂತು ಜನರ ಸೇವೆಯನ್ನು ಅತ್ಯುತ್ತಮವಾಗಿ ಮಾಡಿದೆ ಎಂದರು.

ಟಾಪ್ ನ್ಯೂಸ್

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

tdy-10

ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರು?

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ODI World Cup 2023: Mumbai, Ahmedabad To Hosts Semis And Final

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

3–sulya

ಕಾಣಿಯೂರು: ದೈವ ನರ್ತನದ ವೇಳೆ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

ಚುನಾವಣ ಆಯೋಗವೇ “ಸೂಪರ್‌ ಪವರ್‌’; ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿ

ಚುನಾವಣ ಆಯೋಗವೇ “ಸೂಪರ್‌ ಪವರ್‌’; ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

tdy-13

ಶ್ರೀರಂಗಪಟ್ಟಣ ಕೈನಲ್ಲಿ ಭುಗಿಲೆದ್ದ ಭಿನ್ನಮತ

firing

ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ ; ಸಹೋದ್ಯೋಗಿಯ ಮೇಲೆ ಗುಂಡು!

tdy-12

ಎಚ್‌.ಡಿ.ಕೋಟೆಯಲ್ಲಿ ಜನ ಸಾಮಾನ್ಯರಿಗೆ ಸಿಗದ ಜನೌಷಧ

tdy-11

ಹನೂರು ಕ್ಷೇತ್ರದಲ್ಲಿ ಕಗ್ಗಂಟಾದ ಬಿಜೆಪಿ ಅಭ್ಯರ್ಥಿಯ ಆಯ್ಕೆ

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು