ಮೆಡಿಕಲ್‌ ಕಾಲೇಜಿಗಾಗಿ ಯಾದಗಿರಿ ಬಂದ್‌

Team Udayavani, Jul 11, 2019, 3:05 AM IST

ಯಾದಗಿರಿ: ಜಿಲ್ಲೆಯ ಚಂಡರಕಿ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ್ದ ವೇಳೆ ಸಿಎಂ ಕುಮಾರಸ್ವಾಮಿಯವರು ಯಾದಗಿರಿಗೆ ಮೆಡಿಕಲ್‌ ಕಾಲೇಜು ಉಪಯೋಗವಾಗಲ್ಲ, ಬೇರೆಯವರು ಬಂದು ಓದುತ್ತಾರೆ ಎಂದು ಹೇಳಿದ್ದನ್ನು ಖಂಡಿಸಿ ಬಿಜೆಪಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನೇತೃತ್ವದಲ್ಲಿ ಬುಧವಾರ ಕರೆ ನೀಡಿದ್ದ ಯಾದಗಿರಿ ಬಂದ್‌ ಸಂಪೂರ್ಣವಾಗಿತ್ತು.

ಸ್ವಯಂಪ್ರೇರಿತವಾಗಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ ಸಾರ್ವಜನಿಕರು, ಪ್ರತಿಭಟನೆಯಲ್ಲೂ ಭಾಗವಹಿಸಿದರು. ಅಂಗಡಿ ಮುಂಗಟ್ಟುಗಳು ಮುಚ್ಚಿದ್ದರಿಂದ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತ್ತು. ಆದರೆ, ತುರ್ತುಸೇವೆಗೆ ಯಾವುದೇ ವ್ಯತ್ಯಯವಾಗಲಿಲ್ಲ.

ಈ ವೇಳೆ ಮಾತನಾಡಿದ ಶಾಸಕ ವೆಂಕಟರೆಡ್ಡಿ ಮುದ್ನಾಳ, ಯಾರದೋ ಮಾತು ಕೇಳಿ ರಾಜಕೀಯ ದುರುದ್ದೇಶದಿಂದ ಮುಖ್ಯಮಂತ್ರಿಗಳು ಮೆಡಿಕಲ್‌ ಕಾಲೇಜು ರದ್ದುಪಡಿಸುವ ವಿಚಾರ ಮಾತನಾಡಿದ್ದಾರೆ. ಸರ್ಕಾರ ಹಿಂದುಳಿದ ಭಾಗದ ಅಭಿವೃದ್ಧಿಗೆ ಕಾಳಜಿ ವಹಿಸುತ್ತಿಲ್ಲ ಎಂದು ಆರೋಪಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ಬಳಿಕ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ