ಬಹುಮತ ಸಾಬೀತು ಪಡಿಸುವುದು ನಿಶ್ಚಿತ: ಯಡಿಯೂರಪ್ಪ ವಿಶ್ವಾಸ
Team Udayavani, May 18, 2018, 7:14 PM IST
ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನಾಳೆ ಶನಿವಾರ ರಾಜ್ಯ ವಿಧಾನಸಭೆಯ ಸದನದಲ್ಲಿ ಬಿಜೆಪಿ ಬಹುಮತ ಸಾಬೀತು ಮಾಡುವುದೆಂಬ ವಿಶ್ವಾಸವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ.
ಪಕ್ಷದ ಶಾಸಕರಿಗೆ ತಂಗಲು ಅವಕಾಶ ಮಾಡಿಕೊಡಲಾಗಿರುವ ಹೊಟೇಲಿನಲ್ಲಿ ಇಂದು ರಾತ್ರಿಯೊಳಗೆ ಎಲ್ಲ ಬಿಜೆಪಿ ಶಾಸಕರು ಆಗಮಿಸಿ ತಂಗಬೇಕು ಮತ್ತು ನಾಳೆ 11 ಗಂಟೆಯ ಒಳಗೆ ಸದನಕ್ಕೆ ಹೋಗಲು ಸಜ್ಜಾಗಬೇಕು ಎಂದು ಶಾಸಕರಿಗೆ ಖಡಕ್ ಅಪ್ಪಣೆ ನೀಡಲಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾರಣ ರಾಜ್ಯಪಾಲರು ಅದಕ್ಕೆ ಸರಕಾರ ರಚಿಸುವ ಆಹ್ವಾನ ನೀಡಿದ್ದರು. ರಾಜ್ಯಪಾಲರ ಒಪ್ಪಿಗೆ ಮೇರೆಗೆ ತಾನು ಗುರುವಾರ ಪ್ರಮಾಣ ವಚನ ಸ್ವೀಕರಿಸಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು. ಸುಪ್ರೀಂ ಕೋರ್ಟ್ ತೀರ್ಪಿನ ಕುರಿತಾಗಿ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ನಾಳೆ ಸದನದಲ್ಲಿ ಬಿಜೆಪಿ ತನ್ನ ಬಹುಮತವನ್ನು ಹೇಗೆ ಸಾಬೀತುಪಡಿಸುತ್ತದೆ ಎಂಬುದನ್ನು ಕಾಣಲು ಇಡಿಯ ದೇಶವೇ ಕುತೂಹಲ ತಳೆದಿರುವ ನಡುವೆಯೇ ಯಡಿಯೂರಪ್ಪ ಅವರು ಶೇಕಡಾ ನೂರಕ್ಕೆ ನೂರು ತಾನು ಬಹುಮತ ಸಾಬೀತುಪಡಿಸುವುದು ಖಚಿತ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಎಲ್ಲರ ಹುಬ್ಬು ಮೇಲೇರಲು ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ