ಯಶಸ್ವಿನಿ ಯೋಜನೆ ಮರು ಜಾರಿ

Team Udayavani, Feb 3, 2019, 1:02 AM IST

ಮೈಸೂರು: ಸಿದ್ದರಾಮಯ್ಯ ಸರ್ಕಾರ ರದ್ದು ಮಾಡಿದ್ದ ಯಶಸ್ವಿನಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಿದ್ದು, ಈ ಬಜೆಟ್‌ನಲ್ಲಿ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಜಿಲ್ಲೆಯ ಸುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯುಷ್ಮಾನ್‌ ಭಾರತ್‌ ಯೋಜನೆಯ ಅನುದಾನದಲ್ಲಿ ರಾಜ್ಯದ ಪಾಲು ಹೆಚ್ಚಿದೆ. ಆದರೂ, ಕೇಂದ್ರ ಸರ್ಕಾರದವರು ಇದು ನಮ್ಮ ಯೋಜನೆ ಎಂದು ಬೋರ್ಡ್‌ ಹಾಕಿಕೊಂಡು ತಿರುಗುತ್ತಿದ್ದಾರೆ. ಯೋಜನೆ ನಮ್ಮದು, ಹೆಸರು ಮಾತ್ರ ಮೋದಿ ಸರ್ಕಾರದ್ದು ಎಂದು ಟೀಕಿಸಿದರು. ಕೇಂದ್ರದ ಬಜೆಟ್ನಿಂದ ಕರ್ನಾಟಕಕ್ಕೆ ಯಾವುದೇ ಉಪಯೋಗವಿಲ್ಲ. ರಾಜ್ಯಕ್ಕೆ ಆಗಬೇಕಾದ ಕೆಲಸಗಳ ಬಗ್ಗೆ ಸಾಕಷ್ಟು ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು. ರೈತರಿಗೆ ವರ್ಷಕ್ಕೆ ಆರು ಸಾವಿರ ರೂ. ನೀಡುವುದಾಗಿ ಪ್ರಧಾನಿ ಹೇಳಿದ್ದಾರೆ. ಇದು ದಿನಕ್ಕೆ 17 ರೂ.ಆಗುತ್ತದೆ. ಈ 17 ರೂಪಾಯಿಯಿಂದ ರೈತ ಬದುಕಲು ಸಾಧ್ಯವಾಗುತ್ತದೆಯೇ ಎಂದು ಪ್ರಶ್ನಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ