ಯಡಿಯೂರಪ್ಪ ಒಂದು ಶಕ್ತಿ -ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ: ವಿಜಯೇಂದ್ರ
Team Udayavani, Apr 23, 2023, 7:35 AM IST
ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನಪ್ರಿಯತೆ ಈಗಲೂ ಕುಗ್ಗಿಲ್ಲ. ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ ನಂತರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ. ಯಡಿಯೂರಪ್ಪನವರು ಒಂದು ಶಕ್ತಿ, ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯನ್ನು ಬಿಜೆಪಿ ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತಿದ್ದು ಪಕ್ಷ ಅಧಿಕಾರಕ್ಕೆ ಬಂದ ನಂತರ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬುದನ್ನು ಶಾಸಕರ ಅಭಿಪ್ರಾಯ ಪಡೆದು ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಹೇಳಿದರು.
ದೇಶವನ್ನು ದಿವಾಳಿ ಮಾಡಿರುವ ಕಾಂಗ್ರೆಸ್ ಪಕ್ಷ ಹೇಗಾದರೂ ಮಾಡಿ ಅಧಿಕಾರ ಹಿಡಿದು ತನ್ನ ನಾಯಕರಿಗೆ ಕರ್ನಾಟಕ ಎಟಿಎಂ ಆಗಬೇಕೆಂದು ಬಯಸಿದೆ. ಜೆಡಿಎಸ್‌ನವರು ಅತಂತ್ರ ಫಲಿತಾಂಶ ಬರಲೆಂದು ಕಾಯುತ್ತಿದ್ದಾರೆ. ಆದರೆ, ರಾಜ್ಯದ ಜನರು ಇದಕ್ಕೆ ಅವಕಾಶ ನೀಡುವುದಿಲ್ಲ. ಕೇಂದ್ರ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಗುರುತಿಸಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಲಿದ್ಧಾರೆ ಎಂದು ಹೇಳಿದರು.
ವರುಣ ಮೇಲೆ ನನಗೆ ಅಪಾರ ಪ್ರೀತಿ:
ವರುಣ ಕ್ಷೇತ್ರದ ಮತದಾರರು ಬದಲಾವಣೆ ಬಯಸಿದ್ದಾರೆ. ವರುಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ-ಸಿದ್ದರಾಮಯ್ಯ ನಡುವೆ ಯಾವುದೇ ರೀತಿಯ ಒಳ ಒಪ್ಪಂದವಾಗಿಲ್ಲ. ವರುಣದಿಂದಲೇ ರಾಜ್ಯದ ಜನರು ನನ್ನನ್ನು ಗುರುತಿಸಿದರು. ಹೀಗಾಗಿ ವರುಣ ಮೇಲೆ ನನಗೆ ಅಪಾರ ಪ್ರೀತಿಯಿದೆ ಎಂದರು.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಬಗ್ಗೆ ನಾನು ಕೀಳಾಗಿ ಟೀಕಿಸುವುದಿಲ್ಲ. ಅವರು ಪಕ್ಷೇತರವಾಗಿ ಸ್ಪರ್ಧಿಸಬಹುದಿತ್ತು. ಆದರೆ ಕಾಂಗ್ರೆಸ್‌ಗೆ ಹೋಗಿದ್ದು ತಪ್ಪು. ವೀರಶೈವ- ಲಿಂಗಾಯತ ಧರ್ಮವನ್ನು ಒಡೆಯಲು ಮುಂದಾದ ಕಾಂಗ್ರೆಸ್ ಪಕ್ಷ ಸೇರಿದ್ದು ಬೇಸರ ತರಿಸಿದೆ. ವೀರಶೈವ-ಲಿಂಗಾಯತ ಸಮುದಾಯದ ವೀರೇಂದ್ರ ಪಾಟೀಲ್ ಅವರನ್ನು ಕಾಂಗ್ರೆಸ್ ಕೆಟ್ಟದಾಗಿ ನಡೆಸಿಕೊಂಡಿತು. ಕಾಂಗ್ರೆಸ್ ಸೇರಿರುವ ಜಗದೀಶ ಶೆಟ್ಟರ್ ಅವರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.
ವರುಣಾ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ಬಿಜೆಪಿ ಅಭ್ಯರ್ಥಿ ಸಚಿವ ವಿ. ಸೋಮಣ್ಣ ಅವರು ಗೆಲುವು ಸಾಧಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…